Monday, September 23, 2024
Google search engine
Homeತಾಜಾ ಸುದ್ದಿಐಎಸ್ಐ ಮುಖ್ಯಸ್ಥರಾಗಿ ಪಾಕಿಸ್ತಾನದ ಲೆಫ್ಟಿನೆಂಟ್ ಜನರಲ್ ಅಸಿಮ್ ಮಲಿಕ್ ನೇಮಕ

ಐಎಸ್ಐ ಮುಖ್ಯಸ್ಥರಾಗಿ ಪಾಕಿಸ್ತಾನದ ಲೆಫ್ಟಿನೆಂಟ್ ಜನರಲ್ ಅಸಿಮ್ ಮಲಿಕ್ ನೇಮಕ

ಪಾಕಿಸ್ತಾನದ ಲೆಫ್ಟಿನೆಂಟ್ ಜನರಲ್ ಮುಹಮದ್ ಅಸಿಮ್ ಮಲಿಕ್ ಅವರನ್ನು ಇಂಟರ್ ಸರ್ವಿಸ್ ಇಂಟಲಿಜೆನ್ಸ್ ಐಎಸ್ಐ (ISI) ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ.

2021ರ ನಂತರ ಇದೇ ಮೊದಲ ಬಾರಿಗೆ ಪಾಕಿಸ್ತಾನದ ಅತ್ಯಂತ ಉನ್ನತ ಗುಪ್ತಚರ ಸಂಸ್ಥೆ ಮುಖ್ಯಸ್ಥರನ್ನು ನೇಮಕ ಮಾಡಲಾಗಿದೆ. ಇತ್ತೀಚೆಗಷ್ಟೇ ಅಸಿಮ್ ಮಲಿಕ್ ಅವರನ್ನು ಪಾಕಿಸ್ತಾನದ ಸೇನಾ ಮುಖ್ಯಸ್ಥರಾಗಿ ನೇಮಕ ಮಾಡಲಾಗಿತ್ತು.

ಪಾಕಿಸ್ತಾನದ ಸೇನೆಯ ಸಾರ್ವಜನಿಕ ಸಂಪರ್ಕ ಇಲಾಖೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಪ್ರಸ್ತುತ ದೇಶದಲ್ಲಿನ ರಾಜಕೀಯ ಬೆಳವಣಿಗೆಗಳು ತೀವ್ರವಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ನೇಮಕ ನಡೆದಿದೆ ಎಂದು ಹೇಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments