Sunday, November 24, 2024
Google search engine
Homeತಾಜಾ ಸುದ್ದಿJOB ALART ಕೃಷಿ ಇಲಾಖೆಯಲ್ಲಿ ಖಾಲಿ ಇರುವ 945 ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ!

JOB ALART ಕೃಷಿ ಇಲಾಖೆಯಲ್ಲಿ ಖಾಲಿ ಇರುವ 945 ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ!

ರಾಜ್ಯ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ 945 ಕೃಷಿ ಅಧಿಕಾರಿ ಹುದ್ದೆಗಳಿಗೆ ಕೆಪಿಎಸ್ ಎಸ್ ಸಿ (KPSC) ಅರ್ಜಿ ಆಹ್ವಾನಿಸಿದೆ.

ಕರ್ನಾಟಕ ಲೋಕಸೇವಾ ಆಯೋಗದ (KPSC) ಮೂಲಕ ಕರ್ನಾಟಕ ರಾಜ್ಯ ಕೃಷಿ ಇಲಾಖೆಯು 2024 ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

ಕರ್ನಾಟಕ ರಾಜ್ಯ ಕೃಷಿ ಇಲಾಖೆಯು KPSC ಮೂಲಕ ಇದೇ ಸೆಪ್ಟೆಂಬರ್ ತಿಂಗಳಲ್ಲಿ​​ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, 128 ಕೃಷಿ ಅಧಿಕಾರಿ ಮತ್ತು 817 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ನವೆಂಬರ್‌ 7ರೊಳಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಕೃಷಿ ಅಧಿಕಾರಿ ಹುದ್ದೆಗೆ ಆಯ್ಕೆ ಆದವರಿಗೆ ಮಾಸಿಕ 43,100-83,900 ರೂ. ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗೆ ಆಯ್ಕೆ ಆದವರಿಗೆ 40,900-78,200 ರೂ.ವೇತನ ನಿಗದಿಯಾಗಿದೆ.

ಕೆಎಸ್ ಡಿಎ ಅಧಿಕೃತ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಆಹಾರ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ/ಬಯೋಟೆಕ್ನಾಲಜಿ/ಕೃಷಿ ಇಂಜಿನಿಯರಿಂಗ್‌ನಲ್ಲಿ ಬಿಎಸ್‌ಸಿ, ಬಿಟೆಕ್ ಪೂರ್ಣಗೊಳಿಸಿರಬೇಕು. ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 7 ನವೆಂಬರ್ 2024 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 38 ವರ್ಷಗಳನ್ನು ಹೊಂದಿರಬೇಕಿದೆ.

ಎಸ್‌ಸಿ /ಎಸ್‌ಟಿ/ವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳು, ವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 3 ವರ್ಷಗಳು, ಪಿ ಡಬ್ಲ್ಯೂ ಡಿ/ವಿಧವೆ ಅಭ್ಯರ್ಥಿಗಳು 10 ವರ್ಷಗಳ ಸಡಿಲಿಕೆ ಇರುತ್ತದೆ. ಎಸ್‌ಸಿ /ಎಸ್‌ಟಿ/ವರ್ಗ-1 /ಪಿ ಡಬ್ಲ್ಯೂ ಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ., ವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳು 300 ರೂ. ಶುಲ್ಕ ಪಾವತಿ ಮಾಡಬೇಕಿದೆ ಹಾಗೂ ಸಾಮಾನ್ಯ ಅಭ್ಯರ್ಥಿಗಳು 600 ರೂ.ಗಳನ್ನು ಪಾವತಿ ಮಾಡಬೇಕಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments