ದೇಶದ ಯಾವುದೇ ಪ್ರದೇಶ ಅಥವಾ ಭಾಗವನ್ನು ಪಾಕಿಸ್ತಾನ ಎಂದು ಕರೆಯುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರ ಹೇಳಿಕೆಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ವಿಚಾರಣೆ ವೇಳೆ ಬೆಂಗಳೂರಿ ಗೌರಿಪಾಳ್ಯವನ್ನು ಪಾಕಿಸ್ತಾನ ಎಂದು ಕಮೆಂಟ್ ಮಾಡಿದ್ದಕ್ಕಾಗಿ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪಂಚ ಸದಸ್ಯ ಪೀಠ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶ ವೇದವ್ಯಾಸ್ ಆಚಾರ್ ಶ್ರೀಶಾನಂದ ಬೇಷರತ್ ಕ್ಷಮೆಯಾಚಿಸಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳುವ ತೀರ್ಮಾನವನ್ನು ಕೈಬಿಟ್ಟಿದೆ.
ಭಾರತದ ಯಾವುದೇ ಪ್ರದೇಶ ಅಥವಾ ಭಾಗವನ್ನು ಯಾರು ಕೂಡ ಪಾಕಿಸ್ತಾನ ಎಂದು ಕರೆಯುವಂತಿಲ್ಲ. ಇದು ದೇಶದ ವಾಸವಾಗಿರುವ ಒಂದು ಪ್ರದೇಶದ ಸ್ವಾಯುತ್ತತೆಗೆ ಧಕ್ಕೆ ತರುವಂತಹದ್ದಾಗಿದೆ. ಈ ಪ್ರಶ್ನೆಗೆ ಉತ್ತರ ಸೂರ್ಯನಷ್ಟೇ ಸತ್ಯವಾದದು. ಉತ್ತರದಿಂದ ಸತ್ಯ ಮರೆಮಾಚಲು ಆಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಯಾವುದೇ ವ್ಯಕ್ತಿ ಅಥವಾ ಪ್ರದೇಶವನ್ನು ವೈಯಕ್ತಿಕವಾಗಿ ಟೀಕೆ ಮಾಡುವ ಹಕ್ಕು ಯಾರಿಗೂ ಇಲ್ಲ. ಇದು ಸಂವಿಧಾನದ ಮೂಲ ಆಶಯವಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ತಿಳಿಸಿದ್ದಾರೆ.