Thursday, September 19, 2024
Google search engine
Homeರಾಜ್ಯ17 ಗಂಟೆಗಳ ಕಾರ್ಯಾಚರಣೆ ಯಶಸ್ವಿ: ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಪಾರು!

17 ಗಂಟೆಗಳ ಕಾರ್ಯಾಚರಣೆ ಯಶಸ್ವಿ: ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಪಾರು!

20 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್ ನನ್ನು ಸುಮಾರು 17 ಗಂಟೆಗಳ ಸುದೀರ್ಘ ಕಾರ್ಯಾಚರಣೆ ನಂತರ ಪಾರು ಮಾಡಿದ ಘಟನೆ ವಿಜಯನಗರದ ಇಂಡಿ ತಾಲೂಕಿನಲ್ಲಿ ನಡೆದಿದೆ.

ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ತೋಟದ ಕೊಳವೆ ಬಾವಿಗೆ ಬಿದ್ದ 2 ವರ್ಷದ ಸಾತ್ವಿಕ್ ಕೊನೆಗೆ ಸಾವಿನ ದವಡೆಯಿಂದ ಪಾರಾಗಿದ್ದಾನೆ.

17 ಗಂಟೆಗಳ ಎನ್ಡಿಆರ್ಎಫ್,ಎಸ್ಡಿಆರ್ಎಫ್ ಕಾಯರ್ಾಚರಣೆ ಯಶಸ್ವಿಯಾಗಿದೆ. ತಲೆ ಕೆಳಗೆ ಬಿದ್ದ ಮಗು ಬದುಕಿ ಉಳಿಯುತ್ತಾ ಎಂಬ ಪ್ರಶ್ನೆ ಎಲ್ಲರನ್ನು ಕಾಡಿತ್ತು. ಆದರೆ ಪವಾಡ ಎಂಬಂತೆ ಸಾತ್ವಿಕ್ ಬದುಕಿ ಉಳಿದಿದ್ದು ಅಳುತ್ತಿರುವ ಧ್ವನಿ ಕೇಳಿಸಿದೆ.

20 ಅಡಿ ಆಳದಲ್ಲಿ ಸಿಲುಕಿದ್ದ ಬಾಲಕನ ರಕ್ಷಣೆಗೆ ಕೊಳವೆಬಾವಿ ಪಕ್ಕದಲ್ಲಿ ಸಮಾನಾಂತರವಾಗಿ 2 ಜೆಸಿಬಿ ಬಳಸಿ ಗುಂಡಿಯನ್ನು ತೋಡಲಾಗಿತ್ತು. ಕೊಳವೆ ಬಾವಿಗೆ ಕ್ಯಾಮೆರಾ ಇಳಿಬಿಟ್ಟು ಬಾಲಕನ ಚಲನವಲನ ಗಮನಿಸಲಾಗುತ್ತಿತ್ತು. ಜಿಲ್ಲಾಧಿಕಾರಿ ಟಿ.ಭೂಬಾಲನ್, ಎಸ್ ಪಿ ಋಷಿಕೇಶ ಸೋನಾವಣೆ, ಉಪ ವಿಭಾಗಾಧಿಕಾರಿ ಅಬೀದ್ ಗದ್ಯಾಳ ಅವರು ಸ್ಥಳದಲ್ಲೇ ಬೀಡು ಬಿಟ್ಟು ಕಾಯರ್ಾಚರಣೆ ಗಮನಿಸಿದ್ದರು.

ಸತೀಶ್-ಪೂಜಾ ದಂಪತಿಗೆ ನಾಲ್ಕು ಎಕರೆ ಜಮೀನಿದ್ದು, ನಿಂಬೆ ಮತ್ತು ಕಬ್ಬಿಗೆ ನೀರಿನ ಕೊರತೆ ಎದುರಾಗಿದ್ದ ಹಿನ್ನೆಲೆಯಲ್ಲಿ ಮೊನ್ನೆಯಷ್ಟೇ ಕೊಳವೆ ಬಾವಿ ಕೊರೆಸಿದ್ದರು. ನೀರು ಸಿಕ್ಕಿದ ಹಿನ್ನೆಲೆಯಲ್ಲಿ ಅದನ್ನು ಹಾಗೆಯೇ ಬಿಟ್ಟಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments