Saturday, September 28, 2024
Google search engine
Homeಜಿಲ್ಲಾ ಸುದ್ದಿಚಿಕ್ಕಬಳ್ಳಾಪುರ: ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದು ಮೂವರು ವಿದ್ಯಾರ್ಥಿಗಳು ದುರ್ಮರಣ

ಚಿಕ್ಕಬಳ್ಳಾಪುರ: ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದು ಮೂವರು ವಿದ್ಯಾರ್ಥಿಗಳು ದುರ್ಮರಣ

ಟ್ಯೂಷನ್ ಮುಗಿಸಿಕೊಂಡು ಬೈಕ್ ನಲ್ಲಿ ಮನೆಗೆ ಮರಳುತ್ತಿದ್ದಾಗ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಮೃತಪಟ್ಟ ದಾರುಣ ಘಟನೆ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದೆ.

ಚಿಕ್ಕಬಳ್ಳಾಪುರದ ಗೇರಹಳ್ಳಿ ಗೇಟ್ ಬಳಿ ಬುಧವಾರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ಅವಲಗುರ್ಕಿ ನಿವಾಸಿಗಳಾದ ನಿತೀಶ್ (17), ನಿತಿನ್ (17) ಮತ್ತು ವೈಭವ್ (16) ಮೃತಪಟ್ಟ ದುರ್ದೈವಿ ವಿದ್ಯಾರ್ಥಿಗಳು.

ಟ್ಯೂಷನ್ ಮುಗಿಸಿಕೊಂಡು ಮೂವರು ವಿದ್ಯಾರ್ಥಿಗಳು ಒಂದೇ ಬೈಕ್ ನಲ್ಲಿ ಮನೆಗೆ ಮರಳುತ್ತಿದ್ದಾಗ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನಿತೀಶ್ ಮತ್ತು ನಿತಿನ್ ಬಿಜಿಎಸ್ ಶಾಲೆಯ ಪಿಯುಸಿ ವಿದ್ಯಾರ್ಥಿಗಳಾಗಿದ್ದರೆ, ವೈಭವ್ ಗುಡ್ ಶೆಫರ್ಡ್ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯಾಗಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments