Saturday, September 28, 2024
Google search engine
Homeಜಿಲ್ಲಾ ಸುದ್ದಿಬಾಗಲಕೋಟೆ: ಕ್ಯಾಂಟರ್ ಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಸಾವು

ಬಾಗಲಕೋಟೆ: ಕ್ಯಾಂಟರ್ ಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಸಾವು

ಕಾರು ಕ್ಯಾಂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಕೂಕಿನ ಧನ್ನೂರು ಎಂಬಲ್ಲಿ ಸಂಭವಿಸಿದೆ.

ವಿಜಯಪುರ ಜಿಲ್ಲೆಯ ಬಿದರಕುಂದಿ ಗ್ರಾಮದ ನಿವಾಸಿಗಳಾದ ಲಕ್ಷ್ಮಣ ವಡ್ಡರ್ (55), ಬೈಲಪ್ಪ ಬಿರಾದಾರ್ (45), ರಾಮಣ್ಣ ನಾಯಕ ಮಕ್ಕಳು (50) ಹಾಗೂ ಕಾರು ಚಾಲಕ ರಫಿಕ್ ಮುಲ್ಲಾ (25) ಮೃತಪಟ್ಟಿದ್ದಾರೆ.

ಕಾರು ಮುದ್ದೇಬಿಹಾಳ ಕಡೆ ಹೊರಟಿದ್ದ ಕಾರು ಮುದ್ದೇಬಿಹಾಳದಿಂದ ಹುನಗುಂದ ಕಡೆ ಬರುತ್ತಿದ್ದ ಟ್ಯಾಂಕರ್ ಗೆ ತಡರಾತ್ರಿ 2 ಗಂಟೆ ಡಿಕ್ಕಿ ಹೊಡೆದಿದೆ.

ಕಾರು ಚಾಲಕ ನಿದ್ರೆಗೆ ಜಾರಿದ್ದರಿಂದ ನಿಯಂತ್ರಣ ತಪ್ಪಿ ಕ್ಯಾಂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಕಾರು ನಜ್ಜುಗುಜ್ಜಾಗಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಹುನಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments