ಬೆಂಗಳೂರು ಸಮೀಪದ ಹೊಸೂರಿನಲ್ಲಿ ಟಾಟಾ ಎಲೆಕ್ಟ್ರಾನಿಕ್ ಉತ್ಪಾದನಾ ಕಂಪನಿಯ ಮೊಬೈಲ್ ಫೋನ್ ಉತ್ಪಾದನಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ನಾಗಮಂಗಲದ ಉದ್ದನ್ ಪಳ್ಳಿಯಲ್ಲಿ ಶನಿವಾರ ಮುಂಜಾನೆ 5.30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಕಾರ್ಮಿಕರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗಿದ್ದು, ಮೂವರು ಕಾರ್ಮಿಕರು ಗಾಯಗೊಂಡಿದ್ದಾರೆ.
ಘಟನಾ ಸ್ಥಳದಲ್ಲಿಒ ದಟ್ಟ ಹೊಗೆ ಆವರಿಸಿದ್ದರಿಂದ ಕಾರ್ಮಿಕರು ಹಾಗೂ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದ್ದು, ಹಲವಾರು ಅಗ್ನಿ ಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.
ತಮಿಳುನಾಡಿಗೆ ಸೇರಿದ ಜಾಗದಲ್ಲಿರುವ ಟಾಟಾ ಎಲೆಕ್ಟ್ರಾನಿಕ್ ಕಂಪನಿಯಲ್ಲಿ ದುರ್ಘಟನೆ ಸಂಭವಿಸಿದಾಗ ಮೊದಲ ಶಿಫ್ಟ್ ನಲ್ಲಿ ಸುಮಾರು 1500 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಅಲ್ಲದೇ ಅಗ್ನಿ ದುರಂತ ಸಂಭವಿಸಿರುವ ವಿಷಯವನ್ನು ಕಂಪನಿ ದೃಢಪಡಿಸಿದೆ.
ಅಗ್ನಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಗಾಯಗೊಂಡ ಮೂವರು ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಷ್ಟದ ಪ್ರಮಾಣದ ಅಂದಾಜು ಮಾಡಬೇಕಿದೆ.