ಮಿಂಚಿನದ ಆರಂಭ ಹಾಗೂ ಸಿಡಿಲಬ್ಬದ ಅಂತ್ಯದೊಂದಿಗೆ ಮುಂಬೈ ಇಂಡಿಯನ್ಸ್ ಐಪಿಎಲ್ ಟಿ-20 ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 235 ರನ್ ಗಳ ಕಠಿಣ ಗುರಿ ಒಡ್ಡಿದೆ.
ಮುಂಬೈನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 234 ರನ್ ಗಳಿಸಿತು.
ಸತತ ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ತಂಡಕ್ಕೆ ರೋಹಿತ್ ಶರ್ಮ ಮತ್ತು ಇಶಾನ್ ಕಿಶನ್ ಭರ್ಜರಿ ಆರಂಭ ನೀಡಿದರು. ಇವರಿಬ್ಬರು ಮೊದಲ ವಿಕೆಟ್ ಗೆ 80 ರನ್ ಜೊತೆಯಾಟ ನಿಭಾಯಿಸಿದರು.
ರೋಹಿತ್ 27 ಎಸೆತಗಳಲ್ಲಿ 6 ಬೌಂಡರಿ ಮತ್ತು 3 ಸಿಕ್ಸರ್ ಸಹಾಯದಿಂದ 49 ರನ್ ಸಿಡಿಸಿದರೆ, ಇಶಾನ್ ಕಿಶನ್ 23 ಎಸೆತಗಳಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡ 42 ರನ್ ಬಾರಿಸಿದರು.
ಇವರಿಬ್ಬರು ಒಬ್ಬರ ಹಿಂದೆ ಒಬ್ಬರು ಔಟಾಗುತ್ತಿದ್ದಂತೆ ತಂಡ ನಾಟಕೀಯ ಕುಸಿತ ಅನುಭವಿಸಿತು. ತಂಡಕ್ಕೆ ಮರಳಿದ ಸೂರ್ಯಕುಮಾರ್ ಯಾದವ್ (0) ನಿರಾಸೆ ಮೂಡಿಸಿದರು. ಮಧ್ಯಮ ಕ್ರಮಾಂಕದಲ್ಲಿ ನಾಯಕ ಹಾರ್ದಿಕ್ ಪಾಂಡ್ಯ (39) ರನ್ ಗಳಿಸಿದರು.
ಕೊನೆಯ ಹಂತದಲ್ಲಿ ಜೊತೆಯಾದ ಟಿಮ್ ಡೇವಿಡ್ ಮತ್ತು ರೊಮಾರಿಯೊ ಶೆಫಾರ್ಡ್ 13 ರನ್ ಗಳಲ್ಲಿ 53 ರನ್ ಜೊತೆಯಾಟದಿಂದ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು. ಡೇವಿಡ್ 21 ಎಸೆತಗಳಲ್ಲಿ 2 ಬೌಂಡರಿ ಮತ್ತು 4 ಸಿಕ್ಸರ್ ಒಳಗೊಂಡ 45 ರನ್ ಚಚ್ಚಿದರೆ, ರೊಮಾರಿಯೊ ಕೇವಲ 10 ಎಸೆತಗಳಲ್ಲಿ 3 ಬೌಂಡರಿ ಮತ್ತು 4 ಸಿಕ್ಸರ್ ನೊಂದಿಗೆ 39 ರನ್ ಕೊಳ್ಳೆ ಹೊಡೆದರು.