Monday, September 30, 2024
Google search engine
Homeಕ್ರೀಡೆ27,000 ರನ್ ಪೂರೈಸಿ ಸಚಿನ್ ದಾಖಲೆ ಮುರಿದ ವಿರಾಟ್ ಕೊಹ್ಲಿ!

27,000 ರನ್ ಪೂರೈಸಿ ಸಚಿನ್ ದಾಖಲೆ ಮುರಿದ ವಿರಾಟ್ ಕೊಹ್ಲಿ!

ಭಾರತದ ರನ್ ಮಾಂತ್ರಿಕ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ನಲ್ಲಿ 27,000 ರನ್ ಪೂರೈಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತ್ಯಂತ ವೇಗವಾಗಿ ಈ ಸಾಧನೆ ಮಾಡಿದ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದಿದ್ದಾರೆ.

ಕಾನ್ಪುರದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ 4ನೇ ದಿನದಾಟದಲ್ಲಿ ಮೊದಲ ಇನಿಂಗ್ಸ್ ನಲ್ಲಿ ಬ್ಯಾಟ್ ಮಾಡಿದ ವಿರಾಟ್ ಕೊಹ್ಲಿ 27 ಸಾವಿರ ರನ್ ಪೂರೈಸಿದ ಸಾಧನೆ ಮಾಡಿದರು.

ಸಚಿನ್ ತೆಂಡೂಲ್ಕರ್ 27 ಸಾವಿರ ರನ್ ಪೂರೈಸಲು 623 ಇನಿಂಗ್ಸ್ ಪಡೆದರೆ, ವಿರಾಟ್ ಕೊಹ್ಲಿ 594 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಅಲ್ಲದೇ ಈ ಸಾಧನೆ ಮಾಡಲು 600ಕ್ಕೂ ಕಡಿಮೆ ಇನಿಂಗ್ಸ್ ಪಡೆದ ವಿಶ್ವದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ (650) ಮತ್ತು ಶ್ರೀಲಂಕಾದ ಕುಮಾರ ಸಂಗಕ್ಕಾರ (648) 600ಕ್ಕೂ ಹೆಚ್ಚು ಇನಿಂಗ್ಸ್ ನಲ್ಲಿ 27 ಸಾವಿರ ರನ್ ಪೂರೈಸಿದ ದಾಖಲೆ ಬರೆದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments