ಲೋಕಸಭಾ ಚುನಾವಣೆಗೆ ಕೆಲವೇ ವಾರಗಳು ಇರುವಾಗಲೇ ಬಳ್ಳಾರಿಯ ಜ್ಯೂವೆಲರಿ ಶಾಪ್ ಮಾಲೀಕರ ಮನೆಯಲ್ಲಿ 5.60 ಕೋಟಿ ನಗದು, ಚಿನ್ನಾಭರಣ ಸೇರಿದಂತೆ 7 ಕೋಟಿ ರೂ. ಮೌಲ್ಯದ ಸ್ವತ್ತು ವಶಪಡಿಸಿಕೊಂಡಿದ್ದಾರೆ.
ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸರು ಭಾನುವಾರ ಬೆಳಿಗ್ಗೆ ಕಂಬಳಿ ಬಜಾರ್‌ನಲ್ಲಿರುವ ಹೇಮಾ ಜ್ಯೂವೆಲರಿ ಶಾಪ್ ಮಾಲೀಕರ ಮನೆ ಮೇಲೆ ದಾಳಿ ಮಾಡಿ ಅಕ್ರಮ ಹಣ ವಶಪಡಿಸಿಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ದಾಖಲೆ ಇಲ್ಲದ 5 5.60 ಕೋಟಿ ರೂ. ನಗದು, 3 ಕೆಜಿ ಬಂಗಾರ 103 ಕೆಜಿ ಬೆಳ್ಳಿ ಆಭರಣ, 21 ಕೆಜಿ ಕಚ್ಚಾ ಬೆಳ್ಳಿ ಪತ್ತೆಯಾಗಿದೆ.
ಪ್ರಕರಣ ಸಂಬಂಧ ಆರೋಪಿ ನರೇಶ್ ಎಂಬಾತನನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.