ರಾಜಧಾನಿ ದೆಹಲಿ ಇತಿಹಾಸದಲ್ಲೇ ಅತೀ ದೊಡ್ಡ ಡ್ರಗ್ಸ್ ಬೇಟೆಯಾಡಿರುವ ಪೊಲೀಸರು 200 ಕೋಟಿ ರೂ. ಮೌಲ್ಯದ 500 ಕೆಜಿ ಮೌಲ್ಯದ ಕೊಕೆನ್ ವಶಪಡಿಸಿಕೊಂಡಿದ್ದಾರೆ.
ದಕ್ಷಿಣ ದೆಹಲಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡಿದ್ದು, ನಾಲ್ವರನ್ನು ಬಂಧಿಸಿದ್ದಾರೆ.
ಡ್ರಗ್ಸ್ ಸಾಗಾಟದ ಹಿಂದೆ ಡ್ರಗ್ಸ್ ಮಾಫಿಯಾ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಇತ್ತೀಚೆಗೆ ಆಫ್ಘಾನಿಸ್ತಾನ ಪ್ರಜೆಗಳನ್ನು ಬಂಧಿಸಿ ಅವರ ಬಳಿ 400 ಗ್ರಾಂ ಹೆರೊಯಿನ್ ಮತ್ತು 160 ಗ್ರಾಂ ಕೊಕೆನ್ ವಶಪಡಿಸಿಕೊಂಡಿದ್ದವರು. ಇವರು ನೀಡಿದ ಸುಳಿವಿನ ಮೇರೆಗೆ ಈ ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದೇ ವೇಳೆ ನಡೆದ ಮತ್ತೊಂದು ಪ್ರಕರಣದಲ್ಲಿ 24 ಕೋಟಿ ರೂ. ಮೌಲ್ಯದ 1660 ಕೆಜಿ ತೂಕದ ಕೊಕೆನ್ ಅನ್ನು ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಂದ ವಶಪಡಿಸಿಕೊಳ್ಳಲಾಗಿದೆ.