ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಮ್ ಸೇರಿದಂತೆ ಕ್ರಿಕೆಟಿಗರು ನಾಲ್ಕು ತಿಂಗಳಿಂದ ವೇತನ ಸಿಗದೇ ಪರದಾಡುತ್ತಿದ್ದಾರೆ.
ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಪುರುಷರ ತಂಡಕ್ಕೆ ಮಾತ್ರವಲ್ಲ, ಮಹಿಳಾ ಆಟಗಾರ್ತಿಯರಿಗೂ 4 ತಿಂಗಳಿಂದ ವೇತನವನ್ನೇ ನೀಡಿಲ್ಲ.
ಆರ್ಥಿಕ ಸಂಕಷ್ಟದಿಂದ ತತ್ತರಿಸಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಆಟಗಾರರಿಗೆ ಸೂಕ್ತ ಸೌಲಭ್ಯ ನೀಡದೇ ಇರುವುದಕ್ಕೆ ವ್ಯಾಪಕ ಟೀಕೆ ಎದುರಿಸುತ್ತಿದ್ದು, ಇದೀಗ 4 ತಿಂಗಳಿಂದ ವೇತನ ನೀಡದೇ ಬಾಕಿ ಉಳಿಸಿಕೊಂಡಿರುವುದಕ್ಕೆ ಆಕ್ರೋಶಕ್ಕೆ ಕಾರಣವಾಗಿದೆ.
ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್, ಮೊಹಮದ್ ರಿಜ್ವಾನ್, ಶಾಹಿನ್ ಅಫ್ರಿದಿ ಸೇರಿದಂತೆ ಪ್ರಮುಖ ಆಟಗಾರರಿಗೆ ವೇತನ ಆಗದೇ ಇರುವುದು ಆಘಾತಕಾರಿ ವಿಷಯವಾಗಿದೆ.
2023 ಜುಲೈ 1ರಿಂದ 2026 ಜೂನ್ 30ರ ಅವಧಿವರೆಗೆ 25 ಪುರುಷ ಆಟಗಾರರು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಗುತ್ತಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಆದರೆ ಪಾಕಿಸ್ತಾನ ಕ್ರಿಕೆಟ್ ತಂಡ ಕಳಪೆ ಪ್ರದರ್ಶನ ನೀಡಿದ ಹಿನ್ನೆಲೆಯಲ್ಲಿ ವೇತನ ಬಿಡುಗಡೆ ಮಾಡಿಲ್ಲ ಎಂದು ಮೂಲಗಳು ತಿಳಿಸಿವೆ.
ಪಾಕಿಸ್ತಾನ ಕ್ರಿಕೆಟ್ ತಂಡ ವಿಶ್ವಕಪ್ ನಲ್ಲಿ ಕಳಪೆ ಪ್ರದರ್ಶನ ನೀಡಿದರೆ, ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸೋತು ಇತಿಹಾಸದಲ್ಲೇ ಮೊದಲ ಬಾರಿ ತವರಿನಲ್ಲಿ ಸರಣಿ ಸೋಲಿನ ಅಪಮಾನಕ್ಕೆ ಗುರಿಯಾಗಿತ್ತು.