ನಾರಾಯಣಪುರ ಮತ್ತು ದಂತೆವಾಡ ಗಡಿಯ ಅರಣ್ಯದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ 30 ಮಾವೋವಾದಿಗಳನ್ನು ಎನ್ ಕೌಂಟರ್ ಮಾಡಲಾಗಿದೆ.
ಗುರುವಾರ ಭದ್ರತಾಪಡೆಗಳು ಕಾರ್ಯಾಚರಣೆ ಆರಂಭಿಸಿದ್ದು, ಶನಿವಾರ ಮಧ್ಯಾಹ್ನ 12.30ರ ಸುಮಾರಿಗೆ ಅಂತ್ಯಗೊಂಡಿದೆ. ಇದು ಇತ್ತೀಚಿನ ದಿನಗಳಲ್ಲಿ ನಡೆಸಿದ ಅತ್ಯಂತ ಯಶಸ್ವಿ ಕಾರ್ಯಾಚರಣೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಜಿಲ್ಲಾ ಮೀಸಲು ಪಡೆ ಮತ್ತು ವಿಶೇಷ ಕಾರ್ಯಾಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದು, ಎಕೆ ಸರಣಿ ಸೇರಿದಂತೆ ಮಾದರಿಯ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಗುಪ್ತಚರ ಮಾಹಿತಿ ಆಧರಿಸಿ ಗೋವೆಲ್, ನೆಂದೂರ್ ಮತ್ತು ತುಲ್ ತುಲಿ ಮುಂತಾದ ಗ್ರಾಮಗಳಲ್ಲಿ ಪ್ರತ್ಯೇಕ ತಂಡಗಳಾಗಿ ಕಾರ್ಯಾಚರಣೆ ನಡೆಸಲಾಗಿದೆ.