Friday, November 22, 2024
Google search engine
Homeತಾಜಾ ಸುದ್ದಿದಸರಾ ಪ್ರಯುಕ್ತ ಕೆಎಸ್ಸಾರ್ಟಿಸಿಯಿಂದ ಹೆಚ್ಚುವರಿ 2000 ಬಸ್ ವ್ಯವಸ್ಥೆ

ದಸರಾ ಪ್ರಯುಕ್ತ ಕೆಎಸ್ಸಾರ್ಟಿಸಿಯಿಂದ ಹೆಚ್ಚುವರಿ 2000 ಬಸ್ ವ್ಯವಸ್ಥೆ

ದಸರಾ ಹಬ್ಬದ ರಜೆ ಪ್ರಯಕ್ತ ರಾಜ್ಯಾದ್ಯಂತ ಸಂಚರಿಸಲು ಅನುಕೂಲ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಅಕ್ಟೋಬರ್ 9ರಿಂದ 12ರವರೆಗೆ 2000ಕ್ಕೂ ಅಧಿಕ ಹೆಚ್ಚುವರಿ ಕೆಎಸ್ಸಾರ್ಟಿಸಿ ಬಸ್ ಗಳ ವ್ಯವಸ್ಥೆ ಮಾಡಿದೆ.

ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ 2000ಕ್ಕೂ ಹೆಚ್ಚು ಬಸ್ ಗಳನ್ನು ದಸರಾ ವೀಕ್ಷಣೆಗೆ ಮೈಸೂರು ಸೇರಿದಂತೆ ರಾಜ್ಯದ ನಾನಾ ಕಡೆ ಪ್ರಯಾಣಿಸಲು ವೇಗದೂತ, ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಹಾಗೂ ಅಂಬಾರಿ ಕ್ಲಬ್ ಕ್ಲಾಸ್, ಪಲ್ಲಕ್ಕಿ ಸ್ಲೀಪರ್, ಅಶ್ವಮೇಧ ಸೇರಿದಂತೆ 2000 ಸಾರಿಗೆ ಸೇವೆಗಳ ಜೊತೆಗೆ ಹೆಚ್ಚುವರಿ ಬಸ್‌ ಸೌಲಭ್ಯ ಒದಗಿಸಲು ಕ್ರಮ ಕೈಗೊಂಡಿದೆ.

ಅಕ್ಟೋಬರ್ 9ರಿಂದ 12ರವರೆಗೆ ಬೆಂಗಳೂರಿನಿಂದ ರಾಜ್ಯದ ಮತ್ತು ಅಂತರಾಜ್ಯದ ವಿವಿಧ ಸ್ಥಳಗಳಿಗೆ 2000ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಈ ಬಸ್‌ಗಳು ಹೊರಡಲಿವೆ.

ರಾಜ್ಯದ ಮತ್ತು ಅಂತರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಮರಳು ಅಕ್ಟೋಬರ್ 13ರಿಂದ 14ರವರೆಗೆ ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ಪ್ಲೈ ಬಸ್ ನಿಂದ ನೇರ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 260 ಹೆಚ್ಚುವರಿ ಬಸ್​ಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಕೆಎಸ್ಆರ್​ಟಿಸಿ ಪ್ರಕಟಣೆ ತಿಳಿಸಿದೆ.

ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪೂನಾ, ಏರ್ನಾಕುಲಂ, ಪಾಲ್ಗಾಟ್ ಹಾಗೂ ಇತರೆ ಸ್ಥಳಗಳಿಗೆ ಈ ವಿಶೇಷ ಬಸ್​ ವ್ಯವಸ್ಥೆ ಮಾಡಲಾಗಿದೆ.

ಮೈಸೂರಿಗೆ ಪ್ರತ್ಯೇಕ ವಿಶೇಷ ಬಸ್ ಮೈಸೂರು ದಸರಾ ನೋಡಲು ಹೋಗುವವರೆಗೂ ಸಹ ಹೆಚ್ಚುವರಿ ಬಸ್​ ವ್ಯವಸ್ಥೆ ಕಲ್ಪಿಸಲಾಗಿದೆ. ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆ.ಆರ್.ಎಸ್ ಅಣೆಕಟ್ಟು/ಬೃಂದಾವನ, ಶ್ರೀರಂಗಪಟ್ಟಣ, ನಂಜನಗೂಡು ಸೇರಿದಂತೆ ಮಡಿಕೇರಿ, ಮಂಡ್ಯ, ಮಳವಳ್ಳಿ, ಹೆಚ್. ಡಿ ಕೋಟೆ, ಚಾಮರಾಜನಗರ, ಹುಣಸೂರು. ಕೆ.ಆರ್.ನಗರ, ಗುಂಡ್ಲುಪೇಟೆ ಇತ್ಯಾದಿ ಸ್ಥಳಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸಲು 400 ಹೆಚ್ಚುವರಿ ವಾಹನಗಳು ಸೇರಿ ಒಟ್ಟಾರೆ 660 ದಸರಾ ವಿಶೇಷ ವಾಹನಗಳನ್ನು ಕಾರ್ಯಾಚರಿಸಲು ಯೋಜಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments