Sunday, 8 November 2026 — Kannadavahini
BREAKING NEWS
ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಕಾನೂನು ಬಿಜೆಪಿ ವಿರುದ್ಧ ಅಪಪ್ರಚಾರ: ಡಿಕೆಶಿ, ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ರಿಲೀಫ್ ರಾಜ್ಯ ಕೆಪಿಎಸ್ ಸಿ ಹಗರಣ: ಎಸ್ ಐಟಿ ಮುಖ್ಯಸ್ಥರಾಗಿ ಹಿತೇಂದ್ರ ನೇಮಕ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಕಾನೂನು ಬಿಜೆಪಿ ವಿರುದ್ಧ ಅಪಪ್ರಚಾರ: ಡಿಕೆಶಿ, ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ರಿಲೀಫ್ ರಾಜ್ಯ ಕೆಪಿಎಸ್ ಸಿ ಹಗರಣ: ಎಸ್ ಐಟಿ ಮುಖ್ಯಸ್ಥರಾಗಿ ಹಿತೇಂದ್ರ ನೇಮಕ
ಅಪರಾಧ

bitcoin scam: ಡಿವೈಎಸ್ ಪಿ ಶ್ರೀಧರ್ ಪೂಜಾರ್ ಅರೆಸ್ಟ್: 4ಕ್ಕೇರಿದ ಪೊಲೀಸ್ ಅಧಿಕಾರಿಗಳ ಬಂಧನ ಸಂಖ್ಯೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 20 ವೀಕ್ಷಣೆಗಳು
bitcoin scam
bitcoin scam

ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಬಿಟ್‌ಕಾಯಿನ್ ಹಗರಣದಲ್ಲಿ ತಲೆಮರೆಸಿಕೊಂಡಿದ್ದ ಡಿವೈಎಸ್‌ಪಿ ಶ್ರೀಧರ್ ಪೂಜಾರ್ ಅವರನ್ನು ಸಿಐಡಿಯ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

ವಿಚಾರಣೆಗೆಂದು ಸಿಐಡಿ ಕಚೇರಿಗೆ ಸೋಮವಾರ ಬಂದಿದ್ದ ಪೊಲೀಸ್ ಅಧಿಕಾರಿ ಶ್ರೀಧ‌ರ್ ಅವರನ್ನು ಬಂಧಿಸಲಾಯಿತು ಎಂದು ಎಸ್ ಐಟಿ ಪೊಲೀಸರು ತಿಳಿಸಿದ್ದಾರೆ.

2020ರಲ್ಲಿ ಬೆಂಗಳೂರಿನ ಕಾಟನ್ ​ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಡಿವೈಎಸ್‌ಪಿ ಅವರನ್ನು ಬಂಧಿಸುವ ಮೂಲಕ ಪ್ರಕರಣದಲ್ಲಿ ಬಂಧಿತ ಪೊಲೀಸ್ ಅಧಿಕಾರಿಗಳ ಸಂಖ್ಯೆ 4ಕ್ಕೇರಿದೆ. ಇನ್ ಸ್ಪೆಕ್ಟರ್ ಪ್ರಶಾಂತ್ ಬಾಬು, ಲಕ್ಷ್ಮೀಕಾಂತಯ್ಯ ಮತ್ತು ಚಂದ್ರಾಧರ್ ಅವರನ್ನು ಈಗಾಗಲೇ ಬಂಧಿಸಲಾಗಿದೆ.

ಬಿಟ್‌ ಕಾಯಿನ್ ಹಗರಣದ ವಿಸ್ತೃತ ತನಿಖೆಗಾಗಿ ಸರ್ಕಾರ 2023 ಜುಲೈ 18 ರಂದು ಈ ಪ್ರಕರಣವನ್ನು ಎಸ್​ಐಟಿಗೆ ವಹಿಸಿತ್ತು. ನಂತರ ಕಾಟನ್ ಪೇಟೆ ಠಾಣೆಯಲ್ಲಿ ಶ್ರೀಧರ್ ಪೂಜಾರಿ ವಿರುದ್ಧ ಹೊಸ ಎಫ್ಐಆರ್ ದಾಖಲಾಗಿತ್ತು. ಪ್ರಕರಣ ದಾಖಲಾದ ನಂತರ ಡಿವೈಎಸ್‌ಪಿ ಶ್ರೀಧರ್ ಪೂಜಾರ್ ತಲೆಮರೆಸಿಕೊಂಡಿದ್ದರು. ಇದೀಗ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಬಂಧಿಸಿ ವಿಚಾರಣೆ ನಡೆಸಿದ ನಂತರ ಹಗರಣ ಬೆಳಕಿಗೆ ಬಂದಿದ್ದು, ವಿಶೇಷ ಅಂದರೆ ಬಂಧಿಸಿದ್ದ ಪೊಲೀಸ್ ಅಧಿಕಾರಿಯೇ ಹಗರಣದ ಆರೋಪಿಯೂ ಆಗಿದ್ದಾರೆ.

ಶ್ರೀಧರ್ ಪೂಜಾರಿ ತಲೆಮರೆಸಿಕೊಂಡಿದ್ದರಿಂದ ಘೋಷಿತ ಆರೋಪಿ ಎಂದು ವಾರಂಟ್ ಜಾರಿ ಮಾಡಲಾಗಿತ್ತು. ವಾರಂಟ್ ಜಾರಿ ಪ್ರಶ್ನಿಸಿ ಇತ್ತೀಚೆಗೆ ಶ್ರೀಧರ್ ಪೂಜಾರ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಘೋಷಿತ ಆರೋಪಿ ಆದೇಶವನ್ನು ರದ್ದುಪಡಿಸಿತ್ತು.

ಶ್ರೀಕಿಯನ್ನು ಬಂಧಿಸಿ ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸಲಾಗಿದೆ. ಸಿಸಿಬಿ ತನಿಖೆಯಲ್ಲಿ ಲೋಪ ನಡೆದಿದೆ ಎನ್ನುವುದು ಎಸ್‍ಐಟಿ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಎಫ್‍ಐಆರ್ ಕೂಡ ದಾಖಲಾಗಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8407 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment