Tuesday, October 8, 2024
Google search engine
Homeತಾಜಾ ಸುದ್ದಿಹರಿಯಾಣದಲ್ಲಿ ಹ್ಯಾಟ್ರಿಕ್ ಗೆಲುವಿನತ್ತ ಬಿಜೆಪಿ; `ಕೈ’ ಸಂಭ್ರಮಕ್ಕೆ ಬ್ರೇಕ್!

ಹರಿಯಾಣದಲ್ಲಿ ಹ್ಯಾಟ್ರಿಕ್ ಗೆಲುವಿನತ್ತ ಬಿಜೆಪಿ; `ಕೈ’ ಸಂಭ್ರಮಕ್ಕೆ ಬ್ರೇಕ್!

ಹರಿಯಾಣ ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಆಡಳಿತಾರೂಢ ಬಿಜೆಪಿ ಹ್ಯಾಟ್ರಿಕ್ ಗೆಲುವಿನತ್ತ ದಾಪುಗಾಲಿರಿಸಿದರೆ, ಗೆಲುವಿನ ಸಂಭ್ರಮದಲ್ಲಿದ್ದ ಕಾಂಗ್ರೆಸ್ ಗೆ ಹಿನ್ನಡೆ ಉಂಟಾಗಿದೆ.

ಚುನಾವಣಾ ಪೂರ್ವ ಸಮೀಕ್ಷೆಗಳ ಪ್ರಕಾರ ಹರಿಯಾಣದಲ್ಲಿ ಕಾಂಗ್ರೆಸ್ ಮುನ್ನಡೆ ಪಡೆಯಲಿದ್ದು, ಬಹುಮತಕ್ಕೆ ಅಲ್ಪ ಸ್ಥಾನಗಳ ಕೊರತೆ ಎದುರಿಸಲಿದೆ ಎಂದು ಹೇಳಲಾಗಿತ್ತು. ಆದರೆ ಮಂಗಳವಾರ ಮತ ಎಣಿಕೆ ವೇಳೆ ಅಚ್ಚರಿ ಎಂಬಂತೆ ಬಿಜೆಪಿ ಮುನ್ನಡೆ ಸಾಧಿಸಿದ್ದು, ಸ್ಪಷ್ಟ ಬಹುಮತದತ್ತ ದಾಪುಗಾಲಿರಿಸಿದೆ.

ಹರಿಯಾಣ ವಿಧಾನಸಭೆ 90 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಮತ ಎಣಿಕೆ ಪ್ರಕ್ರಿಯೆ ಮುಕ್ತಾಯ ಹಂತಕ್ಕೆ ಬಂದಿದ್ದು, ಸತತ 2 ಬಾರಿ ಅಧಿಕಾರದಲ್ಲಿರುವ ಬಿಜೆಪಿ 47 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 36 ಸ್ಥಾನಗಳಲ್ಲಿ ಮೇಲುಗೈ ಸಾಧಿಸಿದ್ದು, ಇತರೆ ಪಕ್ಷಗಳು 2ರಲ್ಲಿ ಗೆಲುವಿನತ್ತ ದಾಪುಗಾಲಿರಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments