Thursday, November 21, 2024
Google search engine
Homeಕ್ರೀಡೆನಿತೀಶ್- ರಿಂಕು ಆರ್ಭಟ: ಬಾಂಗ್ಲಾಗೆ ಭಾರತ 222 ರನ್ ಸವಾಲು!

ನಿತೀಶ್- ರಿಂಕು ಆರ್ಭಟ: ಬಾಂಗ್ಲಾಗೆ ಭಾರತ 222 ರನ್ ಸವಾಲು!

ಮಧ್ಯಮ ಕ್ರಮಾಂಕದಲ್ಲಿ ನಿತಿಶ್ ಕುಮಾರ್ ರೆಡ್ಡಿ ಮತ್ತು ರಿಂಕು ಸಿಂಗ್ ಸಿಡಿಸಿದ ಸಿಡಿಲಬ್ಬರದ ಅರ್ಧಶತಕಗಳ ನೆರವಿನಿಂದ ಭಾರತ ತಂಡ ಎರಡನೇ ಟಿ-20 ಪಂದ್ಯದಲ್ಲಿ ಬಾಂಗ್ಲಾದೇಶಕ್ಕೆ 222 ರನ್ ಗಳ ಕಠಿಣ ಗುರಿ ಒಡ್ಡಿದೆ.

ದೆಹಲಿಯಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಭಾರತ ತಂಡ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 221 ರನ್ ಗಳಿಸಿದೆ.

ಭಾರತ ತಂಡ 41 ರನ್ ಗಳಿಸುವಷ್ಟರಲ್ಲಿ 3 ವಿಕೆಟ್ ಕಳೆದುಕೊಂಡು ಆಘಾತಕ್ಕೆ ಒಳಗಾಯಿತು. ಈ ಹಂತದಲ್ಲಿ ಜೊತೆಯಾದ ನಿತಿಶ್ ಕುಮಾರ್ ರೆಡ್ಡಿ ಮತ್ತು ರಿಂಕು ಸಿಂಗ್ 5ನೇ ವಿಕೆಟ್ ಗೆ 108 ರನ್ ಜೊತೆಯಾಟದಿಂದ ತಂಡವನ್ನು ಬೃಹತ್ ಮೊತ್ತದತ್ತ ಮುನ್ನಡೆಸಿದರು.

ನಿತಿಶ್ ಕುಮಾರ್ ರೆಡ್ಡಿ 34 ಎಸೆತಗಳಲ್ಲಿ 4 ಬೌಂಡರಿ ಮತ್ತು 7 ಸಿಕ್ಸರ್ ಸಹಾಯದಿಂದ 74 ರನ್ ಸಿಡಿಸಿದರೆ, ರಿಂಕು ಸಿಂಗ್ 29 ಎಸೆತಗಳಲ್ಲಿ 5 ಬೌಂಡರಿ ಮತ್ತು 3 ಸಿಕ್ಸರ್ ಒಳಗೊಂಡ 53 ರನ್ ಬಾರಿಸಿದರು.

ರಿಂಕು ಸಿಂಗ್ ಔಟಾಗುತ್ತಿದ್ದಂತೆ ತಂಡ ನಾಟಕೀಯ ಕುಸಿತ ಅನುಭವಿಸಿದ್ದು, ಕೆಳ ಹಂತದ ಬ್ಯಾಟ್ಸ್ ಮನ್ ಗಳು ವಿಕೆಟ್ ಕೈ ಚೆಲ್ಲಿದರು. ಬಾಂಗ್ಲಾದೇಶ ಪರ ಟಸ್ಕಿಮ್ ಅಹ್ಮದ್, ತನ್ಸಿಮ್ ಹಸನ್ ಶಕೀಬ್, ಮುಸ್ತಫಿಸುರ್ ತಲಾ 2 ವಿಕೆಟ್ ಪಡೆದರೆ, ರಶೀದ್ ಹುಸೇನ್ 3 ವಿಕೆಟ್ ಪಡೆದು ಮಿಂಚಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments