Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ತಾಜಾ ಸುದ್ದಿ

BREAKING ಮಹಾರಾಷ್ಟ್ರ ಮಾಜಿ ಸಚಿವ ಬಾಬಾ ಸಿದ್ದಿಕಿ ಗುಂಡಿಕ್ಕಿ ಹತ್ಯೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 25 ವೀಕ್ಷಣೆಗಳು
baba siddiki
baba siddiki

ಮಹಾರಾಷ್ಟ್ರದ ಮಾಜಿ ಸಚಿವ ಹಾಗೂ ಅಜಿತ್ ಪವಾರ್ ನೇತೃತ್ವದ ಎನ್ ಸಿಪಿ ಬಣದ ಮುಖಂಡನನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ.

ಬಾಂದ್ರಾ ಪೂರ್ವದ ಶಾಸಕರಾಗಿದ್ದ ಬಾಬಾ ಸಿದ್ದಿಕಿ ಪುತ್ರದ ಕಚೇರಿಗೆ ಭೇಟಿ ನೀಡಿದ ವೇಳೆ ದುಷ್ಕರ್ಮಿಗಳು ಮೂರು ಸುತ್ತು ಗುಂಡು ಹಾರಿಸಿ ಹತ್ಯೆಗೈದಿದ್ದಾರೆ.

ಪುತ್ರ ಜೀಹಾನ್ ಕಚೇರಿಯಲ್ಲಿ ಶನಿವಾರ ರಾತ್ರಿ 9.30ಕ್ಕೆ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದುಷ್ಕರ್ಮಿಗಳು ಹಾರಿಸಿದ ಮೂರು ಗುಂಡುಗಳ ಪೈಕಿ ಒಂದು ಗುಂಡು ಎದೆಯ ಭಾಗಕ್ಕೆ ಬಡಿದಿದ್ದು, ರಕ್ತಸ್ರಾವಕ್ಕೆ ಒಳಗಾದ ಅವರನ್ನು ಕೂಡಲೇ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆಸ್ಪತ್ರೆಗೆ ದಾಖಲಿಸಿದ ಕೆಲವೇ ನಿಮಿಷಗಳಲ್ಲಿ ಮೃತಪಟ್ಟಿದ್ದಾರೆ.

ಬಂಧಿತರ ಪೈಕಿ ಒಬ್ಬಾತ ಉತ್ತರ ಪ್ರದೇಶ ಮತ್ತೊಬ್ಬ ಹರಿಯಾಣ ಮೂಲದವ ಎಂದು ತಿಳಿದು ಬಂದಿದ್ದು, ಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರಕರಣದ ಕುರಿತು ಪೊಲೀಸರಿಂದ ಮಾಹಿತಿ ಕೇಳಿದ್ದಾರೆ.

ಕಾಂಗ್ರೆಸ್ ನಲ್ಲಿ 48 ವರ್ಷಗಳಿಂದ ಗುರುತಿಸಿಕೊಂಡಿದ್ದರು. ಬಾಬಾ ಸಿದ್ದಿಕಿ ಪೂರ್ವ ಬಾಂದ್ರಾದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಕಳೆದ ಫೆಬ್ರವರಿಯಲ್ಲಿ ಕಾಂಗ್ರೆಸ್ ತೊರೆದು ಅಜಿತ್ ಪವಾರ್ ಬಣಕ್ಕೆ ಸೇರ್ಪಡೆಯಾಗಿದ್ದರು. ಆಗಸ್ಟ್ ನಲ್ಲಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment