ಬೆಂಗಳೂರಿನ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಚಾಲನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಯೋಜನೆಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆಯನ್ನು ನಾನೇ ಶಂಕುಸ್ಥಾಪನೆ ಮಾಡಿ ನನ್ನಿಂದಲೇ ಉದ್ಘಾಟನೆಯಾಗಿದೆ. ನುಡಿದಂತೆ ನಡೆದದ್ದಕ್ಕೆ ಮತ್ತೊಂದು ಸಾಕ್ಷಿ ನಿಮ್ಮ ಮುಂದಿದೆ ಎಂದರು.
ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಮತ್ತು ಹಿಂದಿನ ಸರ್ಕಾರಗಳು ಅಗತ್ಯ ಹಣ ಬಿಡುಗಡೆ ಮಾಡದೆ ನಿರಾಸಕ್ತಿ ವಹಿದಿದ್ದರಿಂದ ಯೋಜನೆ ನಿಧಾನವಾಯಿತು. ಮತ್ತೆ ನಾವು ಅಧಿಕಾರಕ್ಕೆ ಬಂದು ಯೋಜನೆ ಲೋಕಾರ್ಪಣೆಗೊಳಿಸಿ 110 ಹಳ್ಳಿಗಳಿಗೆ ನೀರನ್ನು ಒದಗಿಸಿದ್ದೇವೆ.
ಆರನೇ ಹಂತದ ಯೋಜನೆಯನ್ನೂ ಕೈಗೆತ್ತಿಕೊಳ್ಳಲು ಈಗಾಗಲೇ ಸೂಚನೆ ನೀಡಿದ್ದೇನೆ. ನಾವು ನುಡಿದಂತೆ ನಡೆಯುತ್ತೇವೆ. ನಾವು ಸುಳ್ಳು ಹೇಳಿ ಅಧಿಕಾರಕ್ಕೆ ಬರುವುದಿಲ್ಲ. ಅಧಿಕಾರಕ್ಕೆ ಬಂದು ಸುಳ್ಳು ಹೇಳದೆ ನುಡಿದಂತೆ ನಡೆದು ಜನರ ಕೆಲಸ ಮಾಡಿ ತೋರಿಸಿದ್ದೇವೆ ಎಂದರು.