Friday, October 18, 2024
Google search engine
Homeಕಾನೂನುಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಸಂಜೀವ್ ಖನ್ನಾ ಹೆಸರು ಶಿಫಾರಸು!

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಸಂಜೀವ್ ಖನ್ನಾ ಹೆಸರು ಶಿಫಾರಸು!

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಹೆಸರನ್ನು ಹಾಲಿ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅಧಿಕೃತವಾಗಿ ಶಿಫಾರಸು ಮಾಡಿದ್ದಾರೆ.

ಪ್ರಸ್ತುತ ಸುಪ್ರೀಂಕೋರ್ಟ್ ನಲ್ಲಿ ಅತ್ಯಂತ ಅನುಭವಿ 2ನೇ ನ್ಯಾಯಮೂರ್ತಿಯಾಗಿರುವ ಸಂಜೀವ್ ಖನ್ನಾ ಅವರ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ನವೆಂಬರ್ 10ರಂದು ಮುಖ್ಯ ನ್ಯಾಯಮೂರ್ತಿಯಾಗಿ ಡಿವೈ ಚಂದ್ರಚೂಡ್ ಅವರ ಅಧಿಕಾರಾವಧಿ ಪೂರ್ಣಗೊಳ್ಳಲಿದೆ.

ಸುಪ್ರೀಂಕೋರ್ಟ್ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ನೇಮಕಗೊಳ್ಳಲಿದ್ದು, 6 ತಿಂಗಳ ಕಾಲ ಈ ಹುದ್ದೆ ಅಲಂಕರಿಸಲಿದ್ದಾರೆ. 2025 ಮೇ 13ಕ್ಕೆ ನಿವೃತ್ತರಾಗಲಿದ್ದಾರೆ.

ಡಿವೈ ಚಂದ್ರಚೂಡ್ 2022 ನವೆಂಬರ್ 9ರಂದು ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಮುಖ್ಯ ನ್ಯಾಯಮೂರ್ತಿ ಗಳ ನಿವೃತ್ತಿ ವಯಸ್ಸು 65 ವರ್ಷಗಳದ್ದಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments