ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಸೋಲಿನ ಬೆನ್ನಲ್ಲೇ ಬಿಸಿಸಿಐ ಸರಣಿಯ ಉಳಿದೆರಡು ಪಂದ್ಯಗಳಿಗೆ ತಂಡ ಪ್ರಕಟಿಸಿದ್ದು, ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಗೆ ಸ್ಥಾನ ನೀಡಿ ಅಚ್ಚರಿ ಮೂಡಿಸಿದೆ.
ಬೆಂಗಳೂರಿನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 8 ವಿಕೆಟ್ ಗಳಿಂದ ಸೋಲುಂಡಿತು. ಇದರಿಂದ ಮೂರು ಪಂದ್ಯಗಳ ಟೆಸ್ಟ್ ಸರಣಯಲ್ಲಿ 0-1ರಿಂದ ಹಿನ್ನಡೆ ಅನುಭವಿಸಿರುವ ಭಾರತ ಸರಣಿ ಗೆಲ್ಲಬೇಕಾದರೆ ಉಳಿದೆರಡು ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.
ನ್ಯೂಜಿಲೆಂಡ್ 1988ರ ನಂತರ ಮೊದಲ ಬಾರಿ ಭಾರತದ ನೆಲದಲ್ಲಿ ಪಂದ್ಯ ಗೆದ್ದು ಇತಿಹಾಸ ನಿರ್ಮಿಸಿದೆ. ಬೆಂಗಳೂರು ಟೆಸ್ಟ್ ಪಂದ್ಯ ಮುಗಿದ ಬೆನ್ನಲ್ಲೇ ಬಿಸಿಸಿಐ ಪುಣೆ ಮತ್ತು ಮುಂಬೈನಲ್ಲಿ ನಡೆಯಲಿರುವ ಸರಣಿಯ ಉಳಿದೆರಡು ಪಂದ್ಯಗಳಿಗೆ ತಂಡ ಪ್ರಕಟಿಸಿದೆ.
ಭಾರತ ತಂಡ
ರೋಹಿತ್ ಶರ್ಮ (ನಾಯಕ), ಜಸ್ ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿ.ಕೀ.), ಸರ್ಫರಾಜ್ ಖಾನ್, ಕೆಎಲ್ ರಾಹುಲ್, ಶುಭಮನ್ ಗಿಲ್, ಕೆಎಲ್ ರಾಹುಲ್, ಧ್ರುವ ಜುರೆಲ್ (ವಿ.ಕೀ.), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ಮೊಹಮದ್ ಸಿರಾಜ್, ಅಕ್ಷ್ ದೀಪ್.