ಸರಣಿ ಅತ್ಯಾಚಾರ ಪ್ರಕರಣದಲ್ಲಿ ಜೈಲುಪಾಲಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ದಾಖಲಾಗಿರುವ 4 ಪ್ರಕರಣಗಳ ಪೈಕಿ 1ರಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ಈ ಮೂಲಕ ಪ್ರಜ್ವಲ್ ರೇವಣ್ಣ ವಿರುದ್ಧದ 4 ಪ್ರಕರಣಗಳಲ್ಲಿ ಮೂರರಲ್ಲಿ ಜಾಮೀನು ಅರ್ಜಿ ವಜಾಗೊಂಡಿದ್ದು, ಒಂದು ಪ್ರಕರಣ ಬಾಕಿಯಿದೆ.
ಕಳೆದ 5 ತಿಂಗಳಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಕಳೆಯಬೇಕಾಗಿದೆ.