ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 48 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡಗಡೆ ಮಾಡಿದ್ದು, ಪಕ್ಷದ ಪ್ರಮುಖರಿಗೆ ಮಣೆ ಹಾಕಲಾಗಿದೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಶರದ್ ಪವಾರ್ ಬಣದ ಎನ್ ಸಿಪಿ ಹಾಗೂ ಉದ್ಧವ್ ಠಾಕ್ರೆ ಬಣದ ಶಿವಸೇನೆ ತಲಾ 85, 85, 85 ಸ್ಥಾನಗಳನ್ನು ಹಂಚಿಕೊಂಡಿವೆ.
ಕಾಂಗ್ರೆಸ್ ಪ್ರಕಟಿಸಿದ ಮೊದಲ ಪಟ್ಟಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಾನಾ ಪಟೋಲೆ, ಶಾಸಕಾಂಗ ಪಕ್ಷದ ನಾಯಕ ಬಾಳಸಾಹೇಬ್ ಥೋರಟ್, ಪ್ರತಿಪಕ್ಷ ನಾಯಕ ವಿಜಯ್ ವಡೆ ವಟ್ಟಿಯಾರ್, ಮಾಜಿ ಸಿಎಂ ಪೃಥ್ವಿರಾಜ್ ಚೌಹಾಣ್, ವಲಯ ಕಾರ್ಯಕಾರಿ ಸಮಿತಿ ಮುಖಂಡ ನಸೀಂ ಖಾನ್ ಅವರಿಗೆ ಟಿಕೆಟ್ ನೀಡಲಾಗಿದೆ.
ಕಾಂಗ್ರೆಸ್ 288 ವಿಧಾನಸಭಾ ಕ್ಷೇತ್ರಗಳ ಪೈಕಿ 125 ಸ್ಥಾನಗಳಲ್ಲಿ ಸ್ಪರ್ಧಿಸುವ ಬೇಡಿಕೆ ಇಟ್ಟಿತ್ತು. ಶಿವಸೇನೆ 100 ಸ್ಥಾನಗಳಿಗೆ ಬೇಡಿಕೆ ಸಲ್ಲಿಸಿತ್ತು. ಶರದ್ ಪವಾರ್ ಬಣಕ್ಕೆ 88 ಸ್ಥಾನಕ್ಕೆ ಬಿಟ್ಟುಕೊಡುವುದಾಗಿ ಹೇಳಲಾಗಿತ್ತು. ಅಂತಿಮವಾಗಿ ತಲಾ 85 ಸ್ಥಾನ ಹಂಚಿಕೊಂಡವು.