Friday, November 22, 2024
Google search engine
Homeಕ್ರೀಡೆಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಮುಖ: 3 ಹೊಸ ಮುಖಗಳಿಗೆ ಮಣೆ!

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಮುಖ: 3 ಹೊಸ ಮುಖಗಳಿಗೆ ಮಣೆ!

ಗವಾಸ್ಕರ್-ಬಾರ್ಡರ್ ಟ್ರೋಫಿಗಾಗಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟಿಸಲಾಗಿದ್ದು, ಮೂವರು ಹೊಸ ಮುಖಗಳಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ.

ನವೆಂಬರ್ 22ರಿಂದ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟೆಸ್ಟ್ ಸರಣಿಗೆ ಬಿಸಿಸಿಐ ಆಯ್ಕೆ ಸಮಿತಿ ಶುಕ್ರವಾರ ರಾತ್ರಿ 15 ಸದಸ್ಯರ ಭಾರತ ತಂಡ ಪ್ರಕಟಿಸಲಾಗಿದೆ.

ಅಭಿಮನ್ಯು ಈಶ್ವರನ್, ಹರ್ಷಿತ್ ರಾಣಾ ಮತ್ತು ನಿತಿಶ್ ಕುಮಾರ್ ರೆಡ್ಡಿ ಇದೇ ಮೊದಲ ಬಾರಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ತೊಡೆ ಸಂಧು ಸಮಸ್ಯೆಯಿಂದ ಬಳಲುತ್ತಿರುವ ಸ್ಪಿನ್ನರ್ ಕುಲದೀಪ್ ಯಾದವ್ ಆಸ್ಟ್ರೇಲಿಯಾ ಸರಣಿಯಿಂದ ಹೊರಗುಳಿಯಲಿದ್ದಾರೆ.

ಕರ್ನಾಟಕದಿಂದ ಕೆಎಲ್ ರಾಹುಲ್ ಮತ್ತು ಮಧ್ಯಮ ವೇಗಿ ಪ್ರಸಿದ್ಧ ಕೃಷ್ಣ ಸ್ಥಾನ ಪಡೆದಿದ್ದಾರೆ. ಬಾಂಗ್ಲಾ ಮತ್ತು ನ್ಯೂಜಿಲೆಂಡ್ ಸರಣಿಯಲ್ಲಿ ವಿಫಲರಾಗಿರುವ ಕೆಎಲ್ ರಾಹುಲ್ ವ್ಯಾಪಕ ಟೀಕೆ ನಡುವೆಯೇ ತಂಡದಲ್ಲಿ ಅವಕಾಶ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಾಯದ ಸಮಸ್ಯೆಯಿಂದ ಚೇತರಿಸಿಕೊಂಡ ನಂತರ ಪ್ರಸಿದ್ಧ ಕೃಷ್ಣ ತಂಡಕ್ಕೆ ಮರಳಿದ್ದಾರೆ.

ಭಾರತ ಟೆಸ್ಟ್ ತಂಡ
ರೋಹಿತ್ ಶರ್ಮ (ನಾಯಕ), ಜಸ್ ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಷಭ್ ಪಂತ್ (ವಿ.ಕೀ.), ಸರ್ಫರಾಜ್ ಖಾನ್, ಧ್ರುವ ಜುರೆಲ್ (ವಿ.ಕೀ.), ಆರ್.ಅಶ್ವಿನ್, ರವೀಂದ್ರ ಜಡೇಜಾ, ಮೊಹಮದ್ ಸಿರಾಜ್, ಅಕ್ಷ್ ದೀಪ್, ಪ್ರಸಿದ್ಧ ಕೃಷ್ಣ, ಹರ್ಷಿತ್ ರಾಣಾ, ನಿತಿಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.

ಮೀಸಲು ಆಟಗಾರರು: ಮುಖೇಶ್ ಕುಮಾರ್, ನವದೀಪ್ ಸೈನಿ, ಖಲೀಲ್ ಅಹ್ಮದ್.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments