Sunday, November 24, 2024
Google search engine
Homeಜಿಲ್ಲಾ ಸುದ್ದಿಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ 3 ತಿಂಗಳಲ್ಲಿ 41 ನವಜಾತ ಶಿಶುಗಳ ಸಾವು

ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ 3 ತಿಂಗಳಲ್ಲಿ 41 ನವಜಾತ ಶಿಶುಗಳ ಸಾವು

ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ ಮೂರು ತಿಂಗಳಲ್ಲಿ 41 ನವಜಾತ ಶಿಶುಗಳು ಮೃತಪಟ್ಟಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಏರ್ ಕಂಪ್ರೆಸರ್ ಕೆಟ್ಟು ಹೋಗಿರುವುದು ಸೇರಿದಂತೆ ನಾನಾ ಕಾರಣಗಳಿಗೆ ನವಜಾತ ಶಿಶುಗಳು ಮೃತಪಟ್ಟಿವೆ ಎಂದು ಹೇಳಲಾಗುತ್ತಿದೆ.

ಎರಡು ರಾಜ್ಯಗಳ ಗಡಿಗೆ ಹೊಂದಿಕೊಂಡಿರುವ ಬಿಮ್ಸ್ ಎಂದೇ ಕರೆಯಲಾಗುವ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಈ ಘಟನೆ ಸಂಭವಿಸಿದ್ದು, ಮಹಾರಾಷ್ಟ್ರದ ಕೆಲ ತಾಲೂಕು ಹಾಗೂ ಗೋವಾದ ಕೆಲ ಭಾಗದಿಂದ ಸಾಕಷ್ಟು ರೋಗಿಗಳು ಹೆರಿಗೆ, ಅಪಘಾತ ಸೇರಿದಂತೆ ಈ ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ.

ನಿತ್ಯ ಸಾವಿರಾರು ರೋಗಿಗಳು ಬಂದು ಹೋಗುವ ಈ ಆಸ್ಪತ್ರೆಯಲ್ಲಿ ಕಂದಮ್ಮಗಳು ಸಾವನ್ನಪ್ಪುತ್ತಿರುವ ವಿಷಯ ದೊಡ್ಡ ಮಟ್ಟದ ಚರ್ಚೆ ಹುಟ್ಟು ಹಾಕಿದೆ. ಅಧಿಕಾರಿಗಳು ಹಾಗೂ ಕೆಲ ವೈದ್ಯರ ಬೇಜವಾಬ್ದಾರಿಯಿಂದ ಬದುಕಿ ಬಾಳಬೇಕಿದ್ದ ಕಂದಮ್ಮಗಳು ಈಗ ಉಸಿರು ಚೆಲ್ಲುತ್ತಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments