ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಗೆ ನ್ಯಾಯಾಲಯ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಲಭಿಸಿದೆ.
ಕರ್ನಾಟಕ ಹೈಕೋರ್ಟ್ ವೈದ್ಯಕೀಯ ಚಿಕಿತ್ಸೆಗಾಗಿ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ. ಪಾಸ್ ಪೋರ್ಟ್ ಶರಣು ಮಾಡುವುದು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಿದೆ.
ಬೆನ್ನುನೋವಿನಿಂದ ನರಳುತ್ತಿರುವ ದರ್ಶನ್ ಆರೋಗ್ಯ ಸ್ಥಿತಿ ಗಂಭೀರವಾಗಿ ಇರುವುದರಿಂದ ವೈದ್ಯಕೀಯ ಹಿನ್ನೆಲೆಯಲ್ಲಿ ಜಾಮೀನು ಮಂಜೂರು ಮಾಡಲಾಗಿದೆ.
ದರ್ಶನ್ ಗೆ ಬೆನ್ನು ನೋವು ನಿನ್ನೆ ಮೊನ್ನೆ ಬಂದಿದ್ದಲ್ಲ. 2022 ಮತ್ತು 2023ರಿಂದ ದರ್ಶನ್ ಬೆನ್ನು ನೋವಿನಿಂದ ನರಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಮಾನ್ಯ ಜಾಮೀನು ದೊರೆತಿಲ್ಲ. ಬದಲಾಗಿ ವೈದ್ಯಕೀಯ ಕಾರಣಗಳಿಗಾಗಿ ಜಾಮೀನು ದೊರೆತಿದೆ ಎಂದು ದರ್ಶನ್ ಪರ ವಕೀಲ ಸುನೀಲ್ ತಿಳಿಸಿದ್ದಾರೆ.
ದರ್ಶನ್ ಯಾವುದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ. ಆದರೆ ಚಿಕಿತ್ಸೆ ಪಡೆಯುತ್ತಿರುವ ವಿವರಗಳನ್ನು ಒಂದು ವಾರದೊಳಗೆ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನ್ಯಾಯಾಧೀಶರು ಷರತ್ತು ವಿಧಿಸಿದ್ದಾರೆ.
ಪ್ರಸ್ತುತ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ಬುಧವಾರವೇ ಸಂಜೆ ಬಿಡುಗಡೆ ಆಗುವ ಸಾಧ್ಯತೆ ಇದೆ. ಇದರಿಂದ 135 ದಿನಗಳ ಜೈಲು ವಾಸ ಇಂದು ಅಂತ್ಯಗೊಳ್ಳುವ ಸಾಧ್ಯತೆ ಇದೆ.