Thursday, November 14, 2024
Google search engine
Homeತಾಜಾ ಸುದ್ದಿಕೇರಳ ಎಕ್ಸ್ ಪ್ರೆಸ್ ಡಿಕ್ಕಿ ಹೊಡೆದು ನಾಲ್ವರು ಕಾರ್ಮಿಕರ ದುರ್ಮರಣ

ಕೇರಳ ಎಕ್ಸ್ ಪ್ರೆಸ್ ಡಿಕ್ಕಿ ಹೊಡೆದು ನಾಲ್ವರು ಕಾರ್ಮಿಕರ ದುರ್ಮರಣ

ಕೇರಳ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆ ಪಾಲಕ್ಕಾಡ್ ಜಿಲ್ಲೆಯ ಶೋರನೂರ್ ನಲ್ಲಿ ಶನಿವಾರ ಸಂಭವಿಸಿದೆ.

ತಮಿಳುನಾಡು ಮೂಲದ ವಲ್ಲಿ, ರಾಣಿ, ಲಕ್ಷ್ಮಣ್ ಹಾಗೂ ಇನ್ನೋರ್ವ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದಾರೆ.

ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಮತ್ತೊಬ್ಬ ಕಾರ್ಮಿಕ ಭಾರತಪುಳ ನದಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಮೃತನ ದೇಹದ ಪತ್ತೆ ಹಚ್ಚುವ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಶೊರನೂರ್ ಸೇತುವೆ ಬಳಿ ರೈಲ್ವೆ ಹಳಿ ಮೇಲಿದ್ದ ಕಸ ತೆರವುಗೊಳಿಸುತ್ತಿದ್ದಾಗ ದೆಹಲಿ-ತಿರುವನಂತಪುರ ರೈಲು ಡಿಕ್ಕಿ ಹೊಡೆದಿದೆ.

ಕಾರ್ಮಿಕರು ರೈಲು ಬರುವುದನ್ನು ಗಮನಿಸದೇ ಇದ್ದುದರಿಂದ ಈ ಘಟನೆ ಸಂಭವಿಸಿರಬಹುದು. ಇದರ ಬಗ್ಗೆ ಹೆಚ್ಚಿನ ತನಿಖೆಗಳು ನಡೆಯುತ್ತಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments