ಬಾಬಾ ಸಿದ್ದಿಕಿ ಮಾದರಿಯಲ್ಲಿ ಹತ್ಯೆ ಮಾಡುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಜೀವ ಬೆದರಿಕೆ ಹಾಕಿದ 24 ವರ್ಷದ ಯುವತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
10 ದಿನದಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯದೇ ಇದ್ದರೆ ಕಾಂಗ್ರೆಸ್ ಶಾಸಕ ಬಾಬಾ ಸಿದ್ದಿಕಿ ಮಾದರಿಯಲ್ಲಿ ಹತ್ಯೆ ಮಾಡುವುದಾಗಿ ಯುವತಿ ಬೆದರಿಕೆ ಹಾಕಿದ್ದಳು.
ಮುಂಬೈ ಪೊಲೀಸರು ಫಾತಿಮಾ ಖಾನ್ ಎಂಬಾಕೆಯನ್ನು ಬಂಧಿಸಿದ್ದು, ಈಕೆಯ ಮೊಬೈಲ್ ನಿಂದ ಯೋಗಿ ಆದಿತ್ಯನಾಥ್ ಅವರಿಗೆ ಬೆದರಿಕೆ ಸಂದೇಶ ಹೋಗಿದೆ. ಉನ್ನತ ಶಿಕ್ಷಣ ಪಡೆದ ಫಾತಿಮಾ ಖಾನ್ ಮಾನಸಿಕವಾಗಿ ಅಸ್ವಸ್ಥರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಬೈ ಪೊಲೀಸರು ಇತ್ತೀಚೆಗೆ ಬೆದರಿಕೆ ಕರೆಗಳಿಂದ ಒತ್ತಡಕ್ಕೆ ಸಿಲುಕಿದ್ದು, ಬಹುತೇಕ ಬೆದರಿಕೆ ಕರೆಗಳು ಸಲ್ಮಾನ್ ಖಾನ್ ಮತ್ತು ವಿಮಾನಗಳಿಗೆ ಸಂಬಂಧಿಸಿದ್ದಾಗಿದೆ. ಇದೀಗ ಯೋಗಿ ಆದಿತ್ಯನಾಥ್ ಗೆ ವಾಟ್ಸಪ್ ಮೂಲಕ ಬಂದ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಕೂಡಲೇ ಎಚ್ಚೆತ್ತು ಪರಿಶೀಲನೆ ನಡೆಸಿದ್ದರು.