ಎಡಿಜಿಪಿ ಚಂದ್ರಶೇಖರ್ ಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಈ ಹಿಂದೆ ಒಂದು ಪ್ರಕರಣ ದಾಖಲಾಗಿತ್ತು. ಇದೀಗ ಲೋಕಾಯುಕ್ತ ಎಡಿಜಿಪಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ನ್ಯಾಯಾಲಯದ ಸೂಚನೆ ಮೇರೆಗೆ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ದಯಾನಂದ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಬೆದರಿಕೆ ಹಾಕಿದ್ದಾರೆಂದು ಸುಳ್ಳು ಆರೋಪ ಮಾಡಿರುವ ಹಿನ್ನೆಲೆ, ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಅವರ ಅಪ್ತ ಸುರೇಶ್ ಬಾಬು ಮೇಲೆ ದೂರು ದಾಖಲಾಗಿತ್ತು.
ಪತ್ರಿಕಾಗೋಷ್ಠಿ ನಡೆಸಿ ಸುಳ್ಳು ಆರೋಪ ಮಾಡಿರುವುದಾಗಿ ದೂರು ನೀಡಲಾಗಿತ್ತು. ಎಸ್‌ಐಟಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಹೆಚ್ಚಿನ ಸಾಕ್ಷ್ಯಾಧಾರ ಕಲೆ ಹಾಕಲಾಗುತ್ತಿದೆ. ಸಾಕ್ಷ್ಯಾಧಾರ ಇರುವ ಹಿನ್ನೆಲೆ ರಾಜ್ಯಾಪಾಲರ ಅನುಮತಿ ಕೋರಿ ಪತ್ರ ಬರೆಯಲಾಗಿತ್ತು.
ಇದೇ ವಿಚಾರವಾಗಿ ಸುಳ್ಳು ಆರೋಪ ಮಾಡಿ ಬೆದರಿಕೆ ಹಾಕಿರುವುದಾಗಿ ದೂರು ನೀಡಲಾಗಿತ್ತು. ದೂರಿನ ಹಿನ್ನೆಲೆ ಹೆಚ್‌ಡಿಕೆ, ನಿಖಿಲ್ ಹಾಗೂ ಆಪ್ತ ಸುರೇಶ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಹಿಂದೆ ಪೊಲೀಸರು ಎನ್‌ಸಿಆರ್ ದಾಖಲಿಸಿದ್ದರು.