Wednesday, November 6, 2024
Google search engine
Homeಕಾನೂನುಮದರಾಸಗಳಿಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್: ಉತ್ತರಪ್ರದೇಶ ಸರ್ಕಾರಕ್ಕೆ ಮುಖಭಂಗ

ಮದರಾಸಗಳಿಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್: ಉತ್ತರಪ್ರದೇಶ ಸರ್ಕಾರಕ್ಕೆ ಮುಖಭಂಗ

2004 ಕಾಯ್ದೆಯನ್ನು ಎತ್ತಿಹಿಡಿದ ಸುಪ್ರೀಂಕೋರ್ಟ್ ಮದರಸಗಳು ಎಂದಿನಂತೆ ಕಾರ್ಯ ನಿರ್ವಹಿಸಬಹುದು ಎಂದು ಮಹತ್ವದ ತೀರ್ಪು ನೀಡಿದೆ. ಈ ಮೂಲಕ ಉತ್ತರ ಪ್ರದೇಶದ 17 ಲಕ್ಷಕ್ಕೂ ಅಧಿಕ ಮದರಸಗಳು ನಿಟ್ಟುಸಿರುಬಿಟ್ಟರೆ, ರಾಜ್ಯ ಸರ್ಕಾರಕ್ಕೆ ಮುಖಭಂಗವಾಗಿದೆ.

2004ರ ಕಾಯ್ದೆ ಎತ್ತಿ ಹಿಡಿಯವ ಮೂಲಕ ಮದರಸಾ ಶಿಕ್ಷಣ ಸಂಸ್ಥೆಗಳಿಗೆ ಇರುವ ಸಂವಿಧಾನದ ಹಕ್ಕನ್ನು ಎತ್ತಿ ಹಿಡಿದ ಮೂವರು ನ್ಯಾಯಮೂರ್ತಿಗಳ ಪೀಠ ಈ ಹಿಂದೆ ಅಲಹಬಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ರದ್ದುಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತಿ ಜೆಬಿ ಪರ್ದಿವಾಲಾ, ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ, ಮಾರ್ಚ್ 22ರಂದು ಅಲಹಾಬಾದ್ ಹೈಕೋರ್ಟ್ 2004ರಲ್ಲಿ ಮದರಸಾಗಳಿಗೆ ನೀಡಿದ್ದ ಶೈಕ್ಷಣಿಕ ಹಕ್ಕು ಕಾಯ್ದೆ ವ್ಯಾಪ್ತಿಗೆ ಬರುವುದಿಲ್ಲ. ಇದು ಜಾತ್ಯತೀತ ಹಾಗೂ ಸಂವಿಧಾನ ವಿರೋಧಿ ಆಗಿದೆ ಎಂದು ನೀಡಿದ್ದ ತೀರ್ಪವನ್ನು ತಿರಸ್ಕರಿಸಿತು.

ಅಲಹಾಬಾದ್ ಹೈಕೋರ್ಟ್ ಮದರಾಸಗಳನ್ನು ಸಾಮಾನ್ಯ ಶಾಲೆಗಳಾಗಿ ಪರಿವರ್ತಿಸಲು ಉತ್ತರ ಪ್ರದೇಶ ಸರ್ಕಾರಕ್ಕೆ ನೀಡಿದ ಆದೇಶವನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್, ಮದರಸಾಗಳು 12 ತರಗತಿಯೊಳಗಿನ ವಿದ್ಯಾರ್ಥಿಗಳಿಗೆ ವಿತರಿಸುವ ಫಾಜಿಲ್ ಮತ್ತು ಕಾಮಿಲ್ ಪದವಿಗಳನ್ನು ಪರಿಗಣಿಸಲು ಸಾಧ್ಯವಿಲ್ಲ. ಏಕೆಂದರೆ ಇದು ಯುಜಿಸಿ ನಿಯಮಕ್ಕೆ ಅನುಗುಣವಾಗಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments