ಮೂವರು ಮಕ್ಕಳೊಂದಿಗೆ ತುಂಗಭದ್ರಾ ನದಿಗೆ ಹಾರಿ ತಂದೆ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಗದಗ ಜಿಲ್ಲೆಯ ಕೊರ್ಲಹಳ್ಳಿ ಬಳಿ ನಡೆದಿದೆ.
ಮುಂಡರಗಿ ತಾಲೂಕಿನ ಮಕ್ತುಪೂರ ಗ್ರಾಮದ ನಿವಾಸಿ ಮಂಜುನಾಥ ಅರಕೇರಿ, ವೇದಾಂತ (3), ಪವನ (4) ಮತ್ತು ಧನ್ಯಾ (6) ಮೃತಪಟ್ಟಿದ್ದಾರೆ.
ಕೌಟುಂಬಿಕ ಕಲಹದಿಂದ ಮೂವರು ಮಕ್ಕಳನ್ನು ನದಿಗೆ ಎಸೆದ ಬಳಿಕ ತಂದೆ ತಾನೂ ಸಹ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಮುಂಡರಗಿ ಪೊಲೀಸರ ದೌಡಾಯಿಸಿದ್ದಾರೆ.