ಅಮೆರಿಕದ ಅಧ್ಯಕ್ಷೀಯ ಚುನಾವಣೆ ವೇಳೆ ನಡೆದ ಸಮೀಕ್ಷೆ ವೇಳೆ ಶೇ.73ರಷ್ಟು ಜನರು ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಡೆಮಾಕ್ರೆಟಿಕ್ ಪಕ್ಷದ ಕಮಲಾ ಹ್ಯಾರಿಸ್ ಮತ್ತು ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಚುನಾವಣಾ ಪ್ರಚಾರದ ಭಾಷಣಗಳ ನಂತರ ದೇಶದ 93 ಭಾಗಗಳಲ್ಲಿ ಎಡಿಸನ್ ರಿಸರ್ಚ್ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಜನರು ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ಶೇ.25ರಷ್ಟು ಜನರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಸುರಕ್ಷಿತವಾಗಿದ್ದೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮತದಾನದ ಹಿಂದಿನ ನಡೆದ ಸಮೀಕ್ಷೆಯಲ್ಲಿ ಕೋಟ್ಯಂತರ ಜನರು ಬದಲಾವಣೆಯನ್ನು ಬಯಸಿದ್ದಾರೆ.
2020ರ ಅಧ್ಯಕ್ಷೀಯ ಚುನಾವಣೆಯಲ್ಲಿ ನನ್ನನ್ನು ಜೋ ಬಿಡೈನ್ ನ್ಯಾಯಸಮ್ಮತವಾಗಿ ಸೋಲಿಸಲಿಲ್ಲ. ಈ ಬಾರಿ ನ್ಯಾಯ ಸಮ್ಮತ ಚುನಾವಣೆ ನಡೆದು ಸೋತರೆ ಸೋಲು ಒಪ್ಪಿಕೊಳ್ಳುವೆ ಎಂದು ಡೊನಾಲ್ಡ್ ಟ್ರಂಪ್ ಚುನಾವಣೆಯಲ್ಲಿ ಪದೇಪದೆ ವಾದ ಮಂಡಿಸಿದರು.
ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಚುನಾವಣಾ ಪ್ರಚಾರದ ವೇಳೆ ಮೂರು ಬಾರಿ ಹತ್ಯೆ ಪ್ರಯತ್ನ ನಡೆದಿದೆ. ಟ್ರಂಪ್ ವಿರುದ್ಧ ಅಸಮಾಧಾನ ಇದ್ದರೂ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಟ್ರಂಪ್ ಮುನ್ನಡೆ ಸಾಧಿಸಲಿದ್ದಾರೆ ಎಂದು ಹೇಳಲಾಗಿದೆ.