ಮಾಜಿ ಅಧ್ಯಕ್ಷ ಸ್ಪಷ್ಟ ಬಹುಮತ ಗಳಿಸುವ ಮೂಲಕ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಭೇರಿ ಬಾರಿಸಿದರೆ, ಹಾಲಿ ಉಪಾಧ್ಯಕ್ಷೆ ಡೆಮಾಕ್ರೆಟಿಕ್ ಪಕ್ಷದ ಹಾಗೂ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಸೋಲುಂಡಿದ್ದಾರೆ.
ತೀವ್ರ ಕುತೂಹಲ ಕೆರಳಿಸಿದ್ದ ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ 538 ಕ್ಷೇತ್ರಗಳಲ್ಲಿ ನಡೆದ ಚುನಾವಣೆಯಲ್ಲಿ 484 ಸ್ಥಾನಗಳಿಗೆ ಫಲಿತಾಂಶ ಹೊರಬಿದ್ದಿದ್ದು, ಡೊನಾಲ್ಡ್ ಟ್ರಂಪ್ ನೇತೃತ್ವದ ರಿಪಬ್ಲಿಕನ್ ಪಕ್ಷ ಬಹುಮತಕ್ಕೆ ಅಗತ್ಯವಾದ 270 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ. ಈ ಮೂಲಕ ಟ್ರಂಪ್ ಎರಡನೇ ಬಾರಿ ಅಧ್ಯಕ್ಷ ಸ್ಥಾನಕ್ಕೆ ಏರುವುದು ಖಚಿತವಾಗಿದೆ.
ಭಾರತೀಯ ಮೂಲದ ಡೆಮಾಕ್ರೆಟಿಕ್ ಪಕ್ಷದ ಕಮಲಾ ಹ್ಯಾರಿಸ್ 214 ಸ್ಥಾನಗಳಲ್ಲಿ ಜಯಭೇರಿ ಬಾರಿಸಿ ಭಾರೀ ಅಂತರದಿಂದ ಸೋಲುಂಡಿದ್ದಾರೆ.
ಕಳೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಸೋಲಿಗೆ ಕಾರಣವಾಗಿದ್ದ 7 ರಾಜ್ಯಗಳಲ್ಲಿ ಈ ಬಾರಿ 7-0ಯಿಂದ ಕ್ಲೀನ್ ಸ್ವೀಪ್ ಮಾಡಿದ್ದು ಗೆಲುವಿಗೆ ಪ್ರಮುಖ ಕಾರಣವಾಗಿದೆ. ಪ್ರತಿ ಬಾರಿ ಚುನಾವಣೆಯಲ್ಲಿ ಮತಗಳು ಬದಲಾಗುವ 7 ರಾಜ್ಯಗಳಲ್ಲಿ ಕಳೆದ ಬಾರಿ ಡೊನಾಲ್ಡ್ ಟ್ರಂಪ್ 1-6ರಿಂದ ಹಿನ್ನಡೆ ಅನುಭವಿಸಿದ್ದರು. ಈ ಬಾರಿ ಈ ರಾಜ್ಯಗಳಲ್ಲಿ ಕಮಲಾ ಹ್ಯಾರಿಸ್ ಒಂದೂ ಸ್ಥಾನ ಗೆಲ್ಲದೇ ಇರುವುದು ಹಿನ್ನಡೆಗೆ ಪ್ರಮುಖ ಕಾರಣವಾಗಿತ್ತು.
ಪೆನಿನ್ಸುನಿಯಾ, ಅರಿಜೊನಾ, ಮಿಚಿಗನ್, ವಿಸ್ ಕಸಿನ್, ನೆವಡಾ, ಜಾರ್ಜಿಯಾ ಮತ್ತು ಉತ್ತರ ಕ್ಯಾಲಿಫೋರ್ನಿಯಾದಲ್ಲಿ ಡೊನಾಲ್ಡ್ ಟ್ರಂಪ್ ಸ್ಪಷ್ಟ ಗೆಲುವು ಸಾಧಿಸಿದ್ದು, ಕಮಲಾ ಹ್ಯಾರಿಸ್ ಗೆ ದೊಡ್ಡ ಆಘಾತ ನೀಡಿದೆ.