ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಲ್ಲಿ ನೀಡಲಾಗಿದ್ದ ಎಲ್ಲಾ ಸೈಟ್ ಗಳನ್ನು ಜಫ್ತಿ ಮಾಡಲು ಗುರುವಾರ ನಡೆದ ತುರ್ತು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಮುಡಾ 50:50 ಅನುಪಾತದಲ್ಲಿ ಸೈಟು ಹಂಚಿಕೆ ವಿಷಯ ಈಗ ದೊಡ್ಡ ವಿವಾದ ಸೃಷ್ಟಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಲದೇ ಮಾಜಿ ಪದಾಧಿಕಾರಿಗಳು, ಶಾಸಕರು ಹಾಗೂ ಅಧಿಕಾರಿಗಳ ಕೊರಳಿಗೆ ಸುತ್ತಿಕೊಂಡಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಸೈಟ್ ಗಳನ್ನು ಜಫ್ತಿ ಮಾಡಲು ನಿರ್ಧರಿಸಲಾಗಿದೆ.
ಸಭೆಯಲ್ಲಿ ನ್ಯಾಯಮೂರ್ತಿ ಪಿಎನ್ ದೇಸಾಯಿ ವರದಿ ಹಿನ್ನೆಲೆಯಲ್ಲಿ 50:50 ಅನುಪಾತದಲ್ಲಿ ಸೈಟ್ ಪಡೆದವರಿಂದ ಜಪ್ತಿ ಮಾಡುವಂತ ನಿರ್ಧಾರಕ್ಕೆ ಸದಸ್ಯರು ಒಮ್ಮತದ ಒಪ್ಪಿಗೆಯನ್ನು ಸೂಚಿಸಿದರು. ಈ ಹಿನ್ನಲೆಯಲ್ಲಿ ಮುಡಾದಿಂದ 50:50ರ ಅನುಪಾತದಲ್ಲಿ ಸೈಟ್ ಪಡೆವರಿಗೆ ಬಿಗ್ ಶಾಕ್ ಎನ್ನುವಂತೆ ಜಪ್ತಿಯ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಈ ಮೂಲಕ ಇಂದಿನ ಮುಡಾ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ಸದಸ್ಯರು ಒಮ್ಮತದ ಅಭಿಪ್ರಾಯದೊಂದಿಗೆ ವ್ಯಕ್ತ ಪಡಿಸಿ, ಕೈಗೊಂಡಿದ್ದಾರೆ.