Thursday, November 14, 2024
Google search engine
Homeಅಪರಾಧಡಿಕೆಶಿ, ಪ್ರಿಯಾಂಕ್ ಆಪ್ತ ಅಂತ ಅಧಿಕಾರಿಗಳಿಗೆ ವಂಚಿಸುತ್ತಿದ್ದ ಆರೋಪಿ ಅರೆಸ್ಟ್

ಡಿಕೆಶಿ, ಪ್ರಿಯಾಂಕ್ ಆಪ್ತ ಅಂತ ಅಧಿಕಾರಿಗಳಿಗೆ ವಂಚಿಸುತ್ತಿದ್ದ ಆರೋಪಿ ಅರೆಸ್ಟ್

ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ಕಾರ್ಯದರ್ಶಿ ಹಾಗೂ ವಿಶೇಷಾಧಿಕಾರಿ ಎಂದು ಹೇಳಿಕೊಂಡು ಅಧಿಕಾರಿಗಳಿಗೆ ವಂಚಿಸುತ್ತಿದ್ದ ವ್ಯಕ್ತಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

ತುಮಕೂರು ಮೂಲದ ರಘುನಾಥ್ ಎಂಬಾತನನ್ನು ಬೆಂಗಳೂರಿನ ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.

ನಾನು ಡಿಕೆ ಶಿವಕುಮಾರ್ ಮತ್ತು ಪ್ರಿಯಾಂಕ್ ಖರ್ಗೆ ಆಪ್ತ ಎಂದು ಹೇಳಿಕೊಂಡು ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ವರ್ಗಾವಣೆ ಮಾಡಿಸಿಕೊಡುವುದಾಗಿ ಆಮಿಷವೊಡ್ಡಿ ಹಣ ಪಡೆದು ವಂಚಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆಯವರ ಹೆಸರನ್ನು ಹೇಳಿಕೊಂಡು ಇತ್ತೀಚೆಗೆ ಇಂಜಿನಿಯರ್ ಗೆ ಕರೆ ಮಾಡಿದ್ದ ಆರೋಪಿ 2 ಲಕ್ಷ ರೂ. ಬೇಡಿಕೆ ಇಟ್ಟಿದ್ದ. ಇಂಜಿನಿಯರ್ ಅವರಿಂದ ಮುಂಗಡವಾಗಿ 80 ಸಾವಿರ ರೂ. ಹಣ ಪಡೆದಿದ್ದ ರಘುನಾಥ್ ಹಣ ವಾಪಸ್ ಮಾಡದೇ ವಂಚಿಸಿದ್ದು. ಈ ಬಗ್ಗೆ ಮಾಹಿತಿ ಪಡೆದ ಸಚಿವರ ಆಪ್ತ ಕಾರ್ಯದರ್ಶಿಗಳು ನೀಡಿದ ದೂರು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments