Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಅಪರಾಧ

ನೀಟ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಬ್ಲಾಕ್ ಮೇಲ್ ಮಾಡುತ್ತಿದ್ದ ಕೋಚಿಂಗ್ ಸೆಂಟರ್ ಶಿಕ್ಷಕರು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 18 ವೀಕ್ಷಣೆಗಳು
coaching center
coaching center

ನೀಟ್ ಅಭ್ಯರ್ಥಿ ಮೇಲೆ ಅತ್ಯಾಚಾರ ಎಸಗಿದ ಕೋಚಿಂಗ್ ಸೆಂಟರ್ ನ ಇಬ್ಬರು ಶಿಕ್ಷಕರು ಹಲವು ತಿಂಗಳ ಕಾಲ ಆಕೆಗೆ ಬ್ಲಾಕ್ ಮೇಲ್ ಮಾಡಿದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ಕಾನ್ಪುರದ ಖ್ಯಾತ ಕೋಚಿಂಗ್ ಸೆಂಟರ್ ನಲ್ಲಿ ಜನಪ್ರಿಯರಾಗಿದ್ದ ಇಬ್ಬರು ಶಿಕ್ಷಕರು ನೀಟ್ ಮೆಡಿಕಲ್ ಪ್ರವೇಶ ಪರೀಕ್ಷೆ ಆಕಾಂಕ್ಷಿಯಾಗಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದೂ ಅಲ್ಲದೇ ಹಲವು ತಿಂಗಳ ಕಾಲ ಬ್ಲಾಕ್ ಮೇಲ್ ಮಾಡಿ ದೌರ್ಜನ್ಯ ಎಸಗಿದ್ದಾರೆ.

ಕೆಲವು ತಿಂಗಳ ಹಿಂದೆ ಒಬ್ಬ ಶಿಕ್ಷಕ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಸಿಸಿಟಿವಿ ದೃಶ್ಯದ ವೀಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಘಟನೆಯಿಂದ ಧೈರ್ಯ ಪಡೆದ ನೀಟ್ ಆಕಾಂಕ್ಷಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಇಬ್ಬರು ಶಿಕ್ಷಕರನ್ನು ಬಂಧಿಸಿದ್ದಾರೆ.

2022ರಂದು ಯುವತಿ ನೀಟ್ ಮೆಡಿಕಲ್ ಪ್ರವೇಶ ಬರೆಯಲು ಕಾನ್ಪುರದ ಖ್ಯಾತ ಕೋಚಿಂಗ್ ಸೆಂಟರ್ ಸೇರಿದ್ದಳು. 32 ವರ್ಷದ ಶಿಕ್ಷಕ ಸಾಹಿಲ್ ಸಿದ್ದಿಕಿ ಕೆಲವು ಸಮಯದ ನಂತರ ಮನೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಪಾರ್ಟಿ ಹಮ್ಮಿಕೊಂಡಿದ್ದು ಬರುವಂತೆ ಆಹ್ವಾನ ನೀಡಿದ್ದಾನೆ. ಶಿಕ್ಷಕನ ಅಪಾರ್ಟ್ ಮೆಂಟ್ ಗೆ ಹೋದ ನಂತರವೇ ಯುವತಿಗೆ ತಿಳಿದಿದ್ದು ಯಾರೂ ಬಾರದೇ ತನ್ನನ್ನು ಮಾತ್ರ ಆಹ್ವಾನಿಸಿರುವುದು ಎಂದು.

ಈ ವೇಳೆ ಸಿದ್ದಿಕಿ ಜ್ಯೂಸ್ ಕುಡಿದು ಹೋಗು ಎಂದು ಪುಸಲಾಯಿಸಿ ಜ್ಯೂಸ್ ನಲ್ಲಿ ಮತ್ತು ಬರುವ ಔಷಧ ಹಾಕಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದೂ ಅಲ್ಲದೇ ವೀಡಿಯೋ ಮಾಡಿಕೊಂಡಿದ್ದಾನೆ.

ನನ್ನ ಮೇಲೆ ಅತ್ಯಾಚಾರ ಎಸಗಿದ ವೀಡಿಯೋ ತೋರಿಸಿ ನನಗೆ ಬೆದರಿಕೆ ಹಾಕಿದ್ದೂ ಅಲ್ಲದೇ ಕುಟುಂಬದ ಸದಸ್ಯರನ್ನು ಹತ್ಯೆ ಮಾಡುವುದಾಗಿ ಬೆದರಿಸಿದ್ದಾನೆ. ಅಲ್ಲದೇ ಈ ರೀತಿ ಸಾಕಷ್ಟು ಜನರನ್ನು ಕೊಲೆ ಮಾಡಿದ್ದಾಗಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ದೂರಿನಲ್ಲಿ ವಿವರಿಸಿದ್ದಾಳೆ.

ಯುವತಿಯನ್ನು ಬ್ಲಾಕ್ ಮೇಲ್ ಮಾಡಿ ಕೆಲವು ಸಮಯ ತನ್ನ ಜೊತೆ ಕೂಡಿಟ್ಟುಕೊಂಡಿದ್ದು ಪಾರ್ಟಿಗಳಿಗೆ ಆಕೆಯನ್ನು ಕರೆದುಕೊಂಡು ಹೋಗುತ್ತಿದ್ದ. ಈ ವೇಳೆ 39 ವರ್ಷದ ಕೆಮಿಸ್ಟ್ರಿ ಶಿಕ್ಷಕ ವಿಕಾಸ್ ಪೊರ್ವೆಲ್ ಎಂಬಾತ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಹೋಳಿ ಹಬ್ಬಕ್ಕಾಗಿ ಮನೆಗೆ ಮರಳಿದ್ದಾಗ ಕರೆ ಮಾಡಿದ ಸಿದ್ದಿಕಿ ಕೂಡಲೇ ವಾಪಸ್ ಬರುವಂತೆ ಸೂಚಿಸಿದ್ದಾನೆ. ಇಲ್ಲದೇ ಇದ್ದರೆ ಕುಟುಂಬದ ಸದಸ್ಯರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ದೂರಿನಲ್ಲಿ ವಿವರಿಸಿದ್ದಾಳೆ.

ಮತ್ತೊಂದು ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಸಿದ್ದಿಕಿ ಜಾಮೀನಿನ ಮೇಲೆ ಹೊರಗೆ ಬಂದಿದ್ದರಿಂದ ಧೈರ್ಯ ತಂದುಕೊಂಡ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೂಡಲೇ ಇಬ್ಬರು ಶಿಕ್ಷಕರನ್ನು ಬಂಧಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment