Thursday, November 14, 2024
Google search engine
Homeತಾಜಾ ಸುದ್ದಿಬೆಂಗಳೂರಿನಲ್ಲಿ ನ.14 ರಿಂದ ಕೃಷಿಮೇಳ: 4 ನೂತನ ತಳಿ ಬಿಡುಗಡೆ

ಬೆಂಗಳೂರಿನಲ್ಲಿ ನ.14 ರಿಂದ ಕೃಷಿಮೇಳ: 4 ನೂತನ ತಳಿ ಬಿಡುಗಡೆ

ಪ್ರತಿ ವರ್ಷದಂತೆ ಈ ಬಾರಿಯೂ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ವತಿಯಿಂದ ನ.14 ರಿಂದ 17 ರವರೆಗೆ ಹವಾಮಾನ ಚತುರ ಡಿಜಿಟಲ್ ಕೃಷಿ ಎಂಬ ಘೋಷವಾಕ್ಯದೊಂದಿಗೆ 4 ದಿನಗಳ ಕಾಲ ಜಿಕೆವಿಕೆ ಆವರಣದಲ್ಲಿ ಕೃಷಿಮೇಳ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್ ವಿ ಸುರೇಶ ತಿಳಿಸಿದರು.

ಇಂದು ಜಿಕೆವಿಕೆ ಅವಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ, ಅರಣ್ಯ, ಪಶುಸಂಗೋಪನೆ, ಮೀನುಗಾರಿಕೆ, ಕೃಷಿ ಮಾರುಕಟ್ಟೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೃಷಿ ಸಮಾಜ ಮತ್ತು ಕರ್ನಾಟಕ ಹಾಲು ಮಹಾಮಂಡಳಿಗಳ ಸಂಯುಕ್ತ ಆಶ್ರಯದಲ್ಲಿ ಕೃಷಿ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಪ್ರತಿ ವರ್ಷ ನೂತನ ತಳಿಗಳ ಅಭಿವೃದ್ಧಿ, ತಂತ್ರಜ್ಞಾನ ಹಾಗೂ ಆವಿಷ್ಕಾರಗಳೊಂದಿಗೆ ಕೃಷಿ ಮೇಳವನ್ನು ಆಯೋಜಿಸಿಕೊಂಡು ಬರಲಾಗುತ್ತಿದ್ದು, ಅದೇ ರೀತಿ ಈ ಬಾರಿಯೂ ಸಹ ನಾಲ್ಕು ನೂತನ ತಳಿಗಳನ್ನು ಅಭಿವೃದ್ಧಿಪಡಿಸಲಾಗಿದೆ. ಮುಸುಕಿನ ಜೋಳ ಸಂಕರಣ ಎಂ.ಎ.ಎಚ್ 15-84, ಹಲಸಂದೆ ಕೆಬಿಸಿ-12, ಸೂರ್ಯಕಾಂತಿ ಕೆಬಿಎಸ್ ಎಚ್-90 ಹಾಗೂ ಬಾಜ್ರ ನೇಪಿಯರ್ ಪಿ.ಬಿ.ಎನ್-242 ತಳಿಗಳನ್ನು ಕೃಷಿ ಮೇಳದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದರು.

ಡಿಜಿಟಲ್ ಕೃಷಿ ತಂತ್ರಜ್ಞಾನವನ್ನು ಬಳಸಿಕೊಂಡು ಕೃಷಿ ಚಟುವಟಿಕೆಗಳನ್ನು ಸರಳಗೊಳಿಸಲು ಒತ್ತು ನೀಡಲಾಗಿದೆ. ಮಣ್ಣು ಮತ್ತು ಬೆಳೆಗಳ ಆರೋಗ್ಯ ಪರಿವೀಕ್ಷಣೆಗೆ ಮಲ್ಟಿಸ್ಪೆಕ್ಟ್ರಲ್ ಡ್ರೋನ್, ಕೃಷಿ ಡ್ರೋನ್, ರೋಬೋಟಿಕ್ ಕೃಷಿ ಯಂತ್ರ, ಹಣ್ಣಿನ ವರ್ಗೀಕರಣ ಯಂತ್ರ, ಸ್ವಯಂಚಾಲಿತ ರಸಗೊಬ್ಬರ ಹರಡುವ ಯಂತ್ರ, ಆಳ ನಿಯಂತ್ರಕ ರೋಟವೇಟರ್, ಸ್ವಯಂಚಾಲಿತ ಬೂಮ್ ಸ್ಟೇಯರ್, ಸೌರಶಕ್ತಿ ಚಾಲಿತ ಬರ್ಡ್ ಸ್ಟೇರರ್ಗಳು ಕೃಷಿ ಮೇಳದಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ಅವರು ಮಾಹಿತಿ ನೀಡಿದರು.

ಕೃಷಿ ಮೇಳದಲ್ಲಿ ಸಮಗ್ರ ಬೇಸಾಯ ಪದ್ಧತಿ, ಖುಷಿ ಬೇಸಾಯ, ನೂತನ ತಳಿಗಳ ಪ್ರಾತಕ್ಷಿಕೆ, ರೇಷ್ಮೆ ಕೃಷಿ, ತೋಟಗಾರಿಕೆ, ಸಿರಿಧಾನ್ಯ, ಜಲಾನಯನ ನಿರ್ವಹಣೆ, ಸಾವಯವ ಕೃಷಿ. ಮಣ್ಣು ರಹಿತ ಕೃಷಿ ಪದ್ಧತಿ ಹೀಗೆ ಹಲವು ಪ್ರಾತಕ್ಷ್ಮತೆಗಳ ಮೂಲಕ ರೈತರಿಗೆ ಕೃಷಿಯ ಬಗ್ಗೆ ತಿಳಿಸಿಕೊಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಪ್ರತಿಬಾರಿಯು ಕೃಷಿ ಮೇಳದಲ್ಲಿ ಉತ್ತಮ ಕೃಷಿ ಸಾಧಕರನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಈ ಬಾರಿ ಕೃಷಿಯಲ್ಲಿ ಉತ್ತಮ ಸಾಧನೆ ಮಾಡಿದ ಯುವ ರೈತ ಹಾಗೂ ಯುವ ರೈತ ಮಹಿಳೆಯರಿಗೆ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.

ಕೃಷಿ ಮೇಳದಲ್ಲಿ ಸುಮಾರು 700 ಮಳಿಗೆಗಳನ್ನು ತೆರೆಯಲಿದ್ದು, ಇಲ್ಲಿ ನೂತನ ತಂತ್ರ ಜ್ಞಾನ, ಕೃಷಿ ಸಮಸ್ಯೆಗಳಿಗೆ ತಜ್ಞರಿಂದ ವೈಜ್ಞಾನಿಕ ಸಲಹೆ, ಪರಿಹಾರ, ಪ್ರಾತಕ್ಷ್ಮತೆ ಇರಲಿದ್ದು. ಕೃಷಿ ಮೇಳಕ್ಕೆ ಆಗಮಿಸುವ ರೈತರು ಹಾಗೂ ಸಾರ್ವಜನಿಕರಾಗಿ ಜಿಕೆವಿಕೆಯ ಮಹಾದ್ವಾರದಿಂದ ಕೃಷಿ ಮೇಳದ ಸಭಾಂಗಣ ತಲುಪಲು ಉಚಿತ ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿದೆ, ಪ್ರತ್ಯೇಕ ವಾಹನ ನಿಲುಗಡೆ, ಉಚಿತ ಪ್ರವೇಶ, ರಿಯಾಯಿತಿ ದರದಲ್ಲಿ ಮುದ್ದೆ ಊಟದ ವ್ಯವಸ್ಥೆಯನ್ನು ಕಲ್ಪಿಲಾಗಿದ್ದು, ಎಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಕೃಷಿ ವಿಶ್ವವಿದ್ಯಾನಿಲಯದ ವಿಸ್ತರಣಾ ನಿರ್ದೇಶಕ ಡಾ.ವೈ.ಎನ್.ಶಿವಲಿಂಗಯ್ಯ, ಸಂಶೋಧನಾ ನಿರ್ದೇಶಕ ಎಚ್.ಎಸ್.ಶಿವರಾಮು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments