Thursday, November 14, 2024
Google search engine
HomeUncategorizedಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಹೈಕೋರ್ಟ್ ಗೆ ಸಿದ್ದರಾಮಯ್ಯ ಮೊರೆ: ನ.23ಕ್ಕೆ ವಿಚಾರಣೆ ಮುಂದೂಡಿಕೆ

ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಹೈಕೋರ್ಟ್ ಗೆ ಸಿದ್ದರಾಮಯ್ಯ ಮೊರೆ: ನ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮುಡಾ ಹಗರಣದ  ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಎತ್ತಿಹಿಡಿದ ಹೈಕೋರ್ಟ್​ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು​ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.

ನ್ಯಾಯಮೂರ್ತಿಗಳು ತುರ್ತು ವಿಚಾರಣೆಯ ಅಗತ್ಯವಿದೆಯೇ ಎಂದು ಪ್ರಶ್ನಿಸಿದ್ದಾರೆ. ಹೌದು ತುರ್ತು ಅವಶ್ಯಕತೆ ಸೃಷ್ಟಿಯಾಗಿದೆ ನವೆಂಬರ್ 23ಕ್ಕೆ ವಿಚಾರಣೆ ನಡೆಸಬೇಕೆಂದು ಮುಖ್ಯಮಂತ್ರಿ ಪರ ವಕೀಲ ಅಭಿಷೇಕ್ ಸಿಂಘ್ವಿ ಮನವಿ ಮಾಡಿದ್ದಾರೆ. ಮನವಿ ಆಲಿಸಿ ವಿಚಾರಣೆಯನ್ನು ನವೆಂಬರ್ 23ಕ್ಕೆ ಹೈಕೋರ್ಟ್​ ವಿಭಾಗೀಯಪೀಠ ನಿಗದಿಪಡಿಸಿದೆ.

ಹೈಕೋರ್ಟ್‌ ನೀಡಿರುವ ತೀರ್ಪನ್ನು ಪ್ರಶ್ನಿಸಿ ಕಾನೂನು ಹೋರಾಟ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದು, ಹೈಕೋರ್ಟ್‌ನ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ತಮ್ಮ ವಿರುದ್ಧದ ತನಿಖೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿಯನ್ನು ವಜಾ ಮಾಡಿದ್ದ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಹೈಕೋರ್ಟ್‌ನ ವಿಭಾಗೀಯ ಪೀಠವು ನವೆಂಬರ್‌ 23ರಂದು ವಿಚಾರಣೆ ನಡೆಸಲಿದೆ.

ಡಿಸೆಂಬರ್‌ 24ರ ಒಳಗೆ ತನಿಖಾ ವರದಿ ಸಲ್ಲಿಸಲು ನಿರ್ದೇಶಿಸಿತ್ತು. ಆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ ಎಂ ಪಾರ್ವತಿ ಅವರು ಆಕ್ಷೇಪಾರ್ಹವಾದ 14 ನಿವೇಶನಗಳನ್ನು ಮುಡಾಗೆ ಹಿಂದಿರುಗಿಸಿದ್ದರು. ರಾಜ್ಯಪಾಲರ ಆದೇಶ ರದ್ದತಿಗೆ ಕೋರಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್‌ 24ರಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಜಾಗೊಳಿಸಿತ್ತು. ಇದಾದ ಸರಿಸುಮಾರು ಒಂದು ತಿಂಗಳ ಬಳಿಕ ವಕೀಲ ಶತಭಿಷ್‌ ಶಿವಣ್ಣ ಅವರ ಮೂಲಕ ಮೇಲ್ಮನವಿ ಸಲ್ಲಿಕೆಯಾಗಿದೆ.

ಹಿರಿಯ ವಕೀಲ ಡಾ. ಅಭಿಷೇಕ ಮನು ಸಿಂಘ್ವಿ ಅವರು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್‌ ಅವರ ವಿಭಾಗೀಯ ಪೀಠದ ಮುಂದೆ ಮೇಲ್ಮನವಿಯನ್ನು ಬರುವ ನ.23ರ ಶುಕ್ರವಾರ ಅಥವಾ ಶನಿವಾರ ವಿಚಾರಣೆಗೆ ಪರಿಗಣಿಸಬೇಕು ಎಂದು ಉಲ್ಲೇಖಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments