ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲುಗಳಲ್ಲಿರುವ 55 ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲು ರಾಜ್ಯ ಸಚಿವ ಸಂಪುಟ ತೀರ್ಮಾನ ಕೈಗೊಂಡಿದೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ 55 ಕೈದಿಗಳನ್ನು ಜೈಲಿನಿಂದ ಬಿಡುಗಡೆ ನಿರ್ಧಾರ ಕೈಗೊಳ್ಳಲಾಯಿತು.
ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಎಚ್.ಕೆ. ಪಾಟೀಲ್, ಕೋವಿಡ್ ಕಾಲದಲ್ಲಿ ನಡೆದ ಪಿಪಿಟ್ ಕಿಟ್, ಔಷಧ ಮುಂತಾದ ಉಪಕರಣಗಳ ಖರೀದಿಯಲ್ಲಿ ನಡೆದ ಹಗರಣಗಳ ತನಿಖೆಗೆ ಎಸ್ ಐಟಿ ರಚಿಸಲು ಸಂಪುಟ ಸಭೆ ನಿರ್ಧರಿಸಿದೆ ಎಂದರು.
ಬಿಜೆಪಿ ಸಂಸದ ಡಾ. ಮಂಜುನಾಥ್ ಕೋವಿಡ್ ಸಮಯದಲ್ಲಿ ಕಾರ್ಯಪಡೆ ಮುಖ್ಯಸ್ಥರಾಗಿದ್ದು, ಕಾರ್ಯಪಡೆ ನೀಡಿದ ಶಿಫಾರಸ್ಸಿನ ಮೇರೆಗೆ ಖರೀದಿ ಮಾಡಲಾಗಿದೆ ಎಂದು ಕುನ್ಹಾ ವರದಿ ಹೇಳಿದೆ. ಈ ಬಗ್ಗೆಯೂ ಚರ್ಚೆ ನಡೆದಿದ್ದು, ಒಟ್ಟಾರೆ ಕುನ್ಹಾ ವರದಿ ಶಿಫಾರಸ್ಸಿನಂತೆ ಕೋವಿಡ್ ಉಪಕರಣಗಳ ಖರೀದಿ ಕುರಿತು ತನಿಖೆ ನಡೆಸಲು ಎಸ್ ಐಟಿ ರಚಿಸಲಾಗುವುದು ಎಂದು ಅವರು ಹೇಳಿದರು.