Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಜಿಲ್ಲಾ ಸುದ್ದಿ

ಜಮೀರ್ ’ಕರಿಯ’ ಹೇಳಿಕೆಯಿಂದ ಚುನಾವಣೆಯಲ್ಲಿ ನಷ್ಟ ಆಗಿದೆ: ಸಿಪಿ ಯೋಗೇಶ್ವರ್ ಬೇಸರ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 29 ವೀಕ್ಷಣೆಗಳು
cp yogeshwar
cp yogeshwar

ಸಚಿವ ಜಮೀರ್ ಅಹ್ಮದ್ ಖಾನ್ ಕರಿಯ ಎಂದು ವೈಯಕ್ತಿಕವಾಗಿ ನಿಂದಿಸಿದ್ದರಿಂದ ಉಪ ಚುನಾವಣೆಯ ಮತದಾನದಲ್ಲಿ ನಷ್ಟ ಆಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅಸಮಾಧಾನ ಹೊರಹಾಕಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಚುನಾವಣೆಯ ನಂತರ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಜಮೀರ್ ವೈಯಕ್ತಿಕ ನಿಂದನೆ ಮಾಡಿದ್ದರಿಂದ ಒಂದು ಸಮುದಾಯದ ಮತ ಬರಲಿಲ್ಲ. ಇದರಿಂದ ಸೋಲಾಗುತ್ತೆ ಎಂದು ಹೇಳುವುದಿಲ್ಲ. ಬದಲಾಗಿ ಸಮಬಲದ ಹೋರಾಟ ಆಗಿದೆ ಎಂದರು.

ಈ ಚುನಾವಣೆಯಲ್ಲಿ ಗೆದ್ದರೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಹಾಗೂ ಸಾಧನೆಯಿಂದ ಗೆಲುವು ದೊರೆಯಲಿದೆ. ಒಂದು ವೇಳೆ ಸೋತರೆ ನಾನು ಪಕ್ಷಾಂತರ ಮಾಡಿದ್ದಕ್ಕೆ ಜನರು ಬೇಸರಗೊಂಡಿದ್ದಾರೆ ಎಂದು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ದೈತ್ಯ ಶಕ್ತಿ ಆಗಿದ್ದಾರೆ. ಅವರು ಕೂಡ ನನ್ನ ವಿರುದ್ಧ ಪ್ರಚಾರಕ್ಕೆ ಬಂದಿದ್ದಾರೆ.  ಇದರಿಂದ ಮತಗಳು ಚದುರುವ ಸಾಧ್ಯತೆ ಇದೆ. ಆದರೆ ಕಾಂಗ್ರೆಸ್ ಸರ್ಕಾರದ ಯೋಜನೆಗಳ ಬಗ್ಗೆ ಒಳ್ಳೆಯ ಅಭಿಪ್ರಾಯ ಇರುವುದರಿಂದ ಇದು ನನ್ನ ಪಾಲಿಗೆ ಒಳ್ಳೆಯದಾಗಬಹುದು ಎಂದು ಯೋಗೇಶ್ವರ್ ಅಭಿಪ್ರಾಯಪಟ್ಟರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment