ಶ್ರೀಲಂಕಾ ಅಧ್ಯಕ್ಷ ಅನುರಾ ದಿಸ್ಸಾನಾಯಕೆ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪವರ್ ಪಕ್ಷ ಸಾರ್ವತ್ರಿಕ ಚುನಾವಣೆಯಲ್ಲಿ ಜಯಭೇರಿ ಬಾರಿಸಿದೆ.
225 ಸಂಸತ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಈಗಾಗಲೇ 123 ಸ್ಥಾನಗಳಲ್ಲಿ ಜಯ ಸಾಧಿಸುವ ಮೂಲಕ ಸ್ಪಷ್ಟ ಬಹುಮತ ಪಡೆದಿದ್ದು, ಇನ್ನಷ್ಟು ಹೆಚ್ಚಿನ ಸ್ಥಾನ ಗೆಲ್ಲುವತ್ತ ದಾಪುಗಾಲಿರಿಸಿದೆ.
ಆರ್ಥಿಕ ಸಂಕಷ್ಟದಿಂದ ತತ್ತರಿಸಿದ ಶ್ರೀಲಂಕಾದಲ್ಲಿ ಜನರು ಧಂಗೆ ಎದ್ದಿದ್ದರಿಂದ ಹಿಂದಿನ ಆಡಳಿತ ಪಕ್ಷವನ್ನು ಉಚ್ಛಾಟಿಸಲಾಗಿತ್ತು. ಇತ್ತೀಚೆಗೆ ಅಧ್ಯಕ್ಷರಾಗಿ ನೇಮಕಗೊಂಡ ಅನುರಾ ದಿಸ್ಸಾನಾಯಕೆ ಸಾರ್ವತ್ರಿಕ ಚುನಾವಣೆ ಘೋಷಿಸಿ ಪೂರ್ಣ ಪ್ರಮಾಣದ ಸರ್ಕಾರ ರಚನೆಗೆ ಒತ್ತು ನೀಡಿದ್ದರು.
ಅನುರಾ ದಿಸ್ಸಾನಾಯಕೆ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪವರ್ ಪಕ್ಷ ಶೇ.62ರಷ್ಟು ಮತ ಗಳಿಸುವ ಮೂಲಕ ಅಧಿಕಾರದ ಗದ್ದುಗೆ ಹಿಡಿದಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.