ಹವಾಮಾನ ವೈಪರಿತ್ಯ ಅಥವಾ ಬದಲಾವಣೆಯಿಂದ ಭಾರತದ ಶೇ.80ರಷ್ಟು ಜನರಿಗೆ ಆರೋಗ್ಯ ಸಮಸ್ಯೆಗಳು ಕಾಡುತ್ತಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಾಜಿ ವಿಜ್ಞಾನಿ ಆತಂಕ ವ್ಯಕ್ತಪಡಿಸಿದ್ದಾರೆ.
ಡಾ. ಸೌಮ್ಯ ಸ್ವಾಮಿನಾಥನ್ ದೇಶದಲ್ಲಿ ಸ್ಥಿರ ಆರೋಗ್ಯಕ್ಕಾಗಿ ಕೂಡಲೇ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ. ಹವಾಮಾನ ಸಂಬಂಧಿ ಕಾಯಿಲೆಗಳಿಂದ ದೇಶದ ಬಹುತೇಕ ಜನರು ನರಳುತ್ತಿದ್ದಾರೆ ಎಂದು ಹೇಳಿದ್ದಾರೆ.
ಭಾರತದಲ್ಲಿ ಬಹುತೇಕ ಎಲ್ಲರೂ ಪ್ರತ್ಯೇಕ್ಷ ಹಾಗೂ ಪರೋಕ್ಷವಾಗಿ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅದರಲ್ಲೂ ಮಹಿಳೆಯರು ಮತ್ತು ಮಕ್ಕಳನ್ನು ಹೆಚ್ಚಾಗಿ ಕಾಡುತ್ತಿದೆ. ಅತಿಯಾದ ಶೆಖೆ ಹಾಗೂ ತಾಪಮನದ ಪರಿಣಾಮ ಈ ಸಮಸ್ಯೆಗಳು ಕಂಡು ಬರುತ್ತಿವೆ ಎಂದು ಹೇಳಿದ್ದಾರೆ.
ಹವಾಮಾನ ಬದಲಾವಣೆಯಿಂದ ಮಹಿಳೆ ಮತ್ತು ಮಕ್ಕಳ ಆರೋಗ್ಯದ ದುಷ್ಪರಿಣಾಮ ಬೀರುತ್ತಿರುವುದು ಎಲ್ಲರಿಗೂ ತಿಳಿದಿದೆ. ಅದರಲ್ಲೂ ಗ್ರಾಮೀಣ ಪ್ರದೇಶದಲ್ಲಿ ಅಡುಗೆ ಮಾಡುವ ಮಹಿಳೆಯರ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ ಎಂದು ಸೌಮ್ಯಾ ಸ್ವಾಮಿನಾಥನ್ ವಿವರಿಸಿದ್ದಾರೆ.