ಮ್ಯಾಟ್ರಿಮೋನಿಯಲ್ಲಿ ಪರಿಚಯಿಸಿಕೊಂಡು ಮದುವೆ ಆಗುವುದಾಗಿ ನಂಬಿಸಿ ಹಲವು ಯುವತಿಯರಿಂದ 63 ಲಕ್ಷ ರೂ. ವಂಚಿಸಿದ ವಂಚಕನನ್ನು ದಾವಣೆಗೆರೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಮಂಡ್ಯ ತಾಲೂಕಿನ ಮಾಚಹಳ್ಳಿ ನಿವಾಸಿ ಎಂ.ಮಧು ಅಲಿಯಾಸ್ ಮಾದು (31) ಬಂಧಿತ ಆರೋಪಿಯಾಗಿದ್ದು, ಈತ ದಾವಣಗೆರೆ ಅಲ್ಲದೇ ಹರಿಹರ, ಬೆಂಗಳೂರು ಕಾಟನ್ ಪೇಟೆ, ಮೈಸೂರು, ಕೆ ಆರ್ ನಗರ, ಚಿಕ್ಕಮಗಳೂರು ಸೇರಿದಂತೆ ನಾನಾ ಕಡೆ ಯುವತಿಯನ್ನು ವಂಚಿರುವುದು ಬೆಳಕಿಗೆ ಬಂದಿದೆ.
ಮ್ಯಾಟ್ರಿಮೋನಿಯಲ್ಲಿ ಯುವತಿಯರನ್ನು ಪರಿಚಯಿಸಿಕೊಂಡ ಮಧು ಮದುವೆಯಾಗುವುದಾಗಿ ಭರವಸೆ ನೀಡಿದ್ದ ಯುವತಿಯರಿಗೆ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ಪಡೆಯುತ್ತಿದ್ದ. ಹೀಗೆ ಹಲವಾರು ಯುವತಿಯರಿಗೆ ಆರೋಪಿ ವಂಚಿಸಿದ್ದ.
ದಾವಣಗೆರೆ ನಗರದ ಯುವತಿಗೆ ಮೈಸೂರಿನಲ್ಲಿ ರೈಲ್ವೆ ಇಲಾಖೆಯ ವರ್ಕ್ಶಾಪ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಂತ ಹಂತವಾಗಿ 21 ಲಕ್ಷ ರೂ. ಹಣ ಪಡೆದು ವಂಚಿಸಿದ್ದ. ಯುವತಿಗೆ ವಂಚನೆಗೊಳಗಾಗಿದ್ದು ಅರಿವಾಗುತ್ತಿದ್ದಂತೆ ಪೊಲೀಸರಿಗೆ ದೂರು ನೀಡಿದ್ದಳು.
ಪ್ರಕರಣದ ಬೆನ್ನು ಹತ್ತಿದ ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.