ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಗೆ ಅಕ್ರಮ ಆಸ್ತಿ ಪ್ರಕರಣದಲ್ಲಿ ಲೋಕಾಯುಕ್ತ ಜಾರಿ ಮಾಡಲಾಗಿದ್ದು, ಡಿಸೆಂಬರ್ 3ಕ್ಕೂ ಮುನ್ನ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಜಮೀರ್ ಅಹ್ಮದ್ ವಿರುದ್ಧದ ವಿಚಾರಣೆಗೆ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆ ತೆರವುಗೊಂಡ ಹಿನ್ನೆಲೆಯಲ್ಲಿ ಲೋಕಾಯುಕ್ತ ಶನಿವಾರ ನೋಟಿಸ್ ಜಾರಿ ಮಾಡಿದೆ.
ಅಕ್ರಮ ಆಸ್ತಿ ಹಾಗೂ 4000 ಕೋಟಿ ಪೊನ್ಜಿ ಸ್ಕೀಂನಲ್ಲಿ 2021ರಲ್ಲಿ ಜಾರಿ ನಿರ್ದೇಶನಾಲಯ ಜಮೀರ್ ಖಾನ್ ನಿವಾಸದ ಮೇಲೆ ದಾಳಿ ನಡೆಸಿತ್ತು. ನಂತರ ಪ್ರಕರಣವನ್ನು ಎಸಿಬಿಗೆ ವರ್ಗಾಯಿಸಲಾಗಿತ್ತು. ಎಸಿಬಿ ಇದೀಗ ಲೋಕಾಯುಕ್ತದಲ್ಲಿ ಸೇರ್ಪಡೆ ಆಗಿರುವುದರಿಂದ ಲೋಕಾಯುಕ್ತ ತನಿಖೆ ನಡೆಸಲಿದೆ.
ನೋಟಿಸ್ ಜಾರಿ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಜಮೀರ್ ಖಾನ್, ಇದೊಂದು ಸಹಜ ಪ್ರಕ್ರಿಯೆ ಆಗಿದೆ. ಆತಂಕ ಪಡುವ ಅವಶ್ಯಕತೆ ಏನಿಲ್ಲ ಎಂದು ಹೇಳಿದ್ದಾರೆ.