Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಅಪರಾಧ

ಮುಗಿಲ್ ಪೇಟೆ ನಿರ್ದೇಶಕನ ಹತ್ಯೆಗೆ ಯತ್ನ: ಕಿರುತೆರೆ ನಟ ತಾಂಡವ್ ರಾಮ್ ಅರೆಸ್ಟ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 4 ವೀಕ್ಷಣೆಗಳು
tandav ram
tandav ram

ಮುಗಿಲ್ ಪೇಟೆ ನಿರ್ದೇಶಕದ ಹತ್ಯೆಗೆ ಯತ್ನಿಸಿದ ಆರೋಪದ ಮೇಲೆ ಕಿರುತೆರೆ ನಟ ತಾಂಡವ್ ರಾಮ್ ಅವರನ್ನು ಬೆಂಗಳೂರಿನ ಚಂದ್ರಾ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಜೋಡಿ ಹಕ್ಕಿ, ಭೂಮಿಗೆ ಬಂದ ಭಗವಂತ ಮುಂತಾದ ಧಾರವಾಹಿಗಳಲ್ಲಿ ನಟಿಸಿರುವ ತಾಂಡವ್ ರಾವ್ ಅವರನ್ನು ಮಂಗಳವಾರ ಬೆಳಿಗ್ಗೆ ಪೊಲೀಸರು ಬಂಧಿಸಿದ್ದು, ಪರವಾನಗಿ ಹೊಂದಿದ್ದ ಅವರ ಬಂದೂಕನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಿನಿಮಾ ಅರ್ಧಕ್ಕೆ ನಿಲ್ಲಿಸಿದ ವಿಷಯದಲ್ಲಿ ಅಸಮಾಧಾನಗೊಂಡಿದ್ದ ತಾಂಡವ್ ರಾಮ್ ಮತ್ತು ಮುಗಿಲ್ ಪೇಟೆ ನಿರ್ದೇಶಕ ಭರತ್ ನಡುವೆ ಗಲಾಟೆ ನಡೆಸಿತ್ತು.

ತಾಂಡವ್ ರಾಮ್ ನಾಯಕನಾಗಿ ನಟಿಸುತ್ತಿದ್ದ ‘ದೇವನಾಂಪ್ರಿಯ’ ಹೆಸರಿನ ಸಿನಿಮಾ ಸೆಟ್ಟೇರಿತ್ತು, ನಿರ್ದೇಶಕ ಭರತ್ ನಾವುಂಡ ನಿರ್ದೇಶನ ಮಾಡುತ್ತಿದ್ದರು. ಆದರೆ ಸಿನಿಮಾವನ್ನು ಭರತ್ ನಿಲ್ಲಿಸಿಬಿಟ್ಟಿದ್ದರಂತೆ. ಇದರಿಂದ ಸಿಟ್ಟಾಗಿದ್ದ ತಾಂಡವ್, ನಿರ್ದೇಶಕ ಭರತ್​ಗೆ ಬೆದರಿಕೆ ಹಾಕಿದ್ದಾರೆ. ಗುಂಡು ಹಾರಿಸಿ ಹತ್ಯೆಗೂ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ.

ಕೊಲೆ ಬೆದರಿಕೆ ಹಾಕಿದ್ದ ತಾಂಡವ್ ರಾಮ್ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಈ ಹಿನ್ನೆಲೆಯಲ್ಲಿ ಭರತ್ ನೀಡಿದ ಕೊಲೆ ಬೆದರಿಕೆ ದೂರಿನ ಹಿನ್ನೆಲೆಯಲ್ಲಿ ಚಂದ್ರಾಲೇಔಟ್ ಪೊಲೀಸರು ಬಂಧಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment