Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ತಾಜಾ ಸುದ್ದಿ

ಮಹಾರಾಷ್ಟ್ರ ಚುನಾವಣೆ ಶೇ.31ರಷ್ಟು ಮತದಾನ: ಮತದಾನ ಮಾಡಿದ ಸಚಿನ್, ಅಕ್ಷಯ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 19 ವೀಕ್ಷಣೆಗಳು
maharashtra election
maharashtra election

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಬುಧವಾರ ಆರಂಭಗೊಂಡಿದ್ದು, ವಿವಿಧ ಕ್ಷೇತ್ರಗಳ ಗಣ್ಯರು ಬೆಳ್ಳಂಬೆಳಗ್ಗೆಯೇ ಮತದಾನ ಮಾಡಿದ್ದಾರೆ.

ಬುಧವಾರ ಮಧ್ಯಾಹ್ನ 11 ಗಂಟೆಯ ವೇಳೆಗೆ ಶೇ.31.17ರಷ್ಟು ಮತದಾನವಾಗಿದ್ದು, ಮತದಾರರಿಂದ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಸಚಿನ್ ತೆಂಡೂಲ್ಕರ್, ಪತ್ನಿ ಅಂಜಲಿ, ನಟರಾದ ಅಕ್ಷಯ್ ಕುಮಾರ್, ರಾಜ್ ಕುಮಾರ್ ರಾವ್, ಕಾರ್ತಿಕ್ ಆರ್ಯನ್, ಟಿನಾ ದತ್ ಸೇರಿದಂತೆ ಹಲವು ಸೆಲೆಬ್ರೆಟಿಗಳು ಮತದಾನ ಮಾಡಿ ಗಮನ ಸೆಳೆದರು.

288 ಸ್ಥಾನಗಳಿಗೆ 4136 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ದೇಶದ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿ ಇಬ್ಭಾಗವಾಗಿರುವ ಎನ್ ಸಿಪಿ ಮತ್ತು ಶಿವಸೇನೆ ಪಕ್ಷಗಳು ಪರಸ್ಪರ ಮುಖಾಮುಖಿ ಸೆಣಸುತ್ತಿವೆ.

ಮಯುತಿ ಮೈತ್ರಿಕೂಟದಲ್ಲಿ ಬಿಜೆಪಿ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ, ಅಜಿತ್ ಪವಾರ್ ನೇತೃತ್ವದ ಎನ್ ಸಿಪಿ ಪಕ್ಷಗಳು ಸ್ಪರ್ಧಿಸುತ್ತಿದ್ದರೆ, ಮಹಾ ವಿಕಾಸ್ ಅಂಗಡಿ ನೇತೃತ್ವದ ಇಂಡಿಯಾ ಮೈತ್ರಿಕೂಟದಲ್ಲಿ ಕಾಂಗ್ರೆಸ್ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ, ಶರದ್ ಪವಾರ್ ನೇತೃತ್ವದ ಎನ್ ಸಿಪಿ ಪಕ್ಷಗಳು ಸೆಣಸುತ್ತಿವೆ.

288 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಬಹುಮತ ಪಡೆಯಲು 170 ಸ್ಥಾನಗಳ ಅಗತ್ಯವಿದೆ. ಮೈತ್ರಿಕೂಟಗಳು ಸ್ಪರ್ಧಿಸುತ್ತಿರುವುದರಿಂದ ಯಾವುದೇ ಒಂದು ಪಕ್ಷ ಸ್ಪಷ್ಟ ಬಹುಮತ ಪಡೆಯಲು ಸಾಧ್ಯವಿಲ್ಲವಾಗಿದೆ. ಆದರೆ ಆಡಳಿತಾರೂಢ ಮೈತ್ರಿ ಪಕ್ಷದಲ್ಲಿರುವ ಬಿಜೆಪಿ 149 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿವೆ. ಶಿವಸೇನೆ 81 ಮತ್ತು ಎನ್ ಸಿಪಿ 59 ಸ್ಥಾನಗಳಲ್ಲಿ ಕಣಕ್ಕಿಳಿದಿವೆ.

ಇಂಡಿಯಾ ಮೈತ್ರಿಕೂಟದಲ್ಲಿ ಕಾಂಗ್ರೆಸ್ 101, ಕಾಂಗ್ರೆಸ್-ಶಿವಸೇನಾ ಮೈತ್ರಿ ಅಭ್ಯರ್ಥಿ 95 ಕ್ಷೇತ್ರಗಳಲ್ಲಿ ಎನ್ ಸಿಪಿ- 86 ಮತ್ತು ಇತರೆ 7 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಸುಮಾರು 1 ಕೋಟಿಗೂ ಅಧಿಕ ಮತದಾರರು ಮತ ಚಲಾಯಿಸುವ ಸಾಧ್ಯತೆ ಇದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಒಗ್ಗೂಡಿ ಸ್ಪರ್ಧಿಸಿದ್ದ ಬಿಜೆಪಿ ಮತ್ತು ಶಿವಸೇನೆ ಫಲಿತಾಂಶದ ನಂತರ ಅಧಿಕಾರ ಪಡೆಯುವ ವಿಷಯದಲ್ಲಿ ಮನಸ್ತಾಪ ಮಾಡಿಕೊಂಡು ಬೇರ್ಪಟ್ಟಿದ್ದು, ಕಾಂಗ್ರೆಸ್, ಎನ್ ಸಿಪಿ ಮತ್ತು ಶಿವಸೇನೆ ಜೊತೆಗೂಡಿ ಸರ್ಕಾರ ರಚನೆ ಮಾಡಿತ್ತು. ಆದರೆ ಬಿಜೆಪಿ ಆಪರೇಷನ್ ಕಮಲ ಮಾಡಿ ಶಿವಸೇನೆಯನ್ನು ಇಬ್ಭಾಗ ಮಾಡಿ ಏಕನಾಥ್ ಶಿಂಧೆ ನೇತ್ವತ್ವದಲ್ಲಿ ಸರ್ಕಾರವನ್ನು ಪತನಗೊಳಿಸಿ ಹೊಸ ಸರ್ಕಾರ ರಚಿಸಿತು. ನಂತರ ಎನ್ ಸಿಪಿಯನ್ನು ಇಬ್ಭಾಗ ಮಾಡಿ ಅಜಿತ್ ಪವಾರ್ ಬಣವನ್ನು ಸರ್ಕಾರದ ಭಾಗವಾಗಿ ಮಾಡಿಕೊಂಡಿತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment