ಪೊಲೀಸರ ಎನ್ ಕೌಂಟರ್ ಗೆ ಬಲಿಯಾದ ನಕ್ಸಲೇಟ್ ವಿಕ್ರಂಗೌಡ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಪಲ್ಟಿಯಾದ ಘಟನೆ ಉಡುಪಿಯಲ್ಲಿ ಬುಧವಾರ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ 19ರಲ್ಲಿ ಬುಧವಾರ ಬೆಳಿಗ್ಗೆ ಹೆಬ್ರಿಯ ಕೂಡ್ಲುವಿನಲ್ಲಿ ಈ ಘಟನೆ ನಡೆದಿದ್ದು, ಯಾರಿಗೂ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.
ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಂತರ ವಿಕ್ರಂಗೌಡ ಮೃತದೇಹವನ್ನು ಮನೆಯವರಿಗೆ ಹಸ್ತಾಂತರಿಸಲು ಆಂಬುಲೆನ್ಸ್ ನಲ್ಲಿ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.
naxalಕೂಡ್ಲುವಿನ ಬಳಿ ಏಕಾಏಕಿ ದನ ಅಡ್ಡ ಬಂದಿದ್ದರಿಂದ ದನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ವಾಹನ ತಿರುಗಿಸಿದ್ದರಿಂದ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.
ಸ್ಥಳೀಯರ ನೆರವಿನಿಂದ ಅಂಬುಲೆನ್ಸ್ ಅನ್ನು ರಸ್ತೆಗೆ ತಂದು ಮೃತದೇಹವನ್ನು ಕೊಂಡೊಯ್ಯಲಾಗಿದೆ. ಮಧ್ಯಾಹ್ನ ವಿಕ್ರಂ ಗೌಡನ ಸ್ವಗ್ರಾಮ ಕೂಡ್ಲುಗೆ ಮೃತದೇಹ ತಲುಪಿದೆ. ಕುಟುಂಬಸ್ಥರು ಅಂತಿಮ ವಿಧಿ ವಿಧಾನ ನಡೆಸಿದ ಬಳಿಕ ಚಿತೆಗೆ ಅಗ್ನಿ ಸ್ಪರ್ಶ ನಡೆಯಲಿದೆ.