Thursday, November 21, 2024
Google search engine
Homeತಾಜಾ ಸುದ್ದಿLokayukta Raid ಲೋಕಾಯುಕ್ತ ದಾಳಿ: 4 ಅಧಿಕಾರಿಗಳ ಮನೆಯಲ್ಲಿ ಅಪಾರ ಸಂಪತ್ತು ಪತ್ತೆ!

Lokayukta Raid ಲೋಕಾಯುಕ್ತ ದಾಳಿ: 4 ಅಧಿಕಾರಿಗಳ ಮನೆಯಲ್ಲಿ ಅಪಾರ ಸಂಪತ್ತು ಪತ್ತೆ!

ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ 4 ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸುವ ಮೂಲಕ ಶಾಕ್ ನೀಡಿದರೆ, ಈ ಅಧಿಕಾರಿಗಳ ಮನೆಯಲ್ಲಿ ಪತ್ತೆಯಾದ ಅಕ್ರಮ ಸಂಪತ್ತು ನೋಡಿ ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ.ಗುರುವಾರ ಮುಂಜಾನೆ ನಾಲ್ವರು ಅಧಿಕಾರಿಗಳ ಮನೆ, ಕಚೇರಿ ಹಾಗೂ ಸಂಬಂಧಿಕರ ಮನೆ

ಸೇರಿದಂತೆ ಬೆಂಗಳೂರು, ಮಂಗಳೂರು, ಚಿಕ್ಕಬಳ್ಳಾಪುರ, ದಾವಣಗೆರೆ, ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ೨೫ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ.

ಬೆಂಗಳೂರಿನ ನಗರ ಯೋಜನಾ ಘಟಕದ ನಿರ್ದೇಶಕ ತಿಪ್ಪೇಸ್ವಾಮಿ, ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮತ್ತು ಅಬಕಾರಿ ಎಸ್ಪಿ ಮೋಹನ್ ಅವರ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.

ದಾವಣಗೆರೆ ಲೋಕಾಯುಕ್ತ ಇನ್ಸ್ ಪೆಕ್ಟರ್ ಪ್ರಭು ನೇತ್ರತ್ವದ ತಂಡ ತಿಪ್ಪೇಸ್ವಾಮಿ ಪತ್ನಿಯ ತವರು ಮನೆಯಾದ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಕುದರೆ ಗ್ರಾಮದ ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ಎಸ್ಪಿ ಶ್ರೀನಾಥ್ ಜೋಷಿ ನೇತೃತ್ವದ ತಂಡ ತಿಪ್ಪೇಸ್ವಾಮಿಯವರ ಬೆಂಗಳೂರು ಗಿರಿನಗರದಲ್ಲಿರುವ ಬಂಗಲೆ ಮೇಲೆ ದಾಳಿ ಮಾಡಲಾಗಿದ್ದು, ಅಪಾರ ಪ್ರಮಾಣದ ಚಿನ್ನ ಪತ್ತೆಯಾದ ಹಿನ್ನೆಲೆಯಲ್ಲಿ ಚಿನ್ನಾಭರಣ ತೂಕ ಹಾಕಲು ಲೋಕಾ ಅಧಿಕಾರಿಗಳು ತಿಪ್ಪೇಸ್ವಾಮಿ ಮನೆಗೆ ಅಕ್ಕಸಾಲಿಗನನ್ನು ಕರೆಸಿದ್ದಾರೆ.

ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್ ಅವರ ಮೈಸೂರು, ಬೆಂಗಳೂರು, ಮಂಡ್ಯದ ಮಳವಳ್ಳಿಯಲ್ಲಿರುವ ಮನೆಗಳು ಹಾಗೂ ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.

ಕೆಆರ್ಎಸ್ನಲ್ಲಿ ಮಹೇಶ್ ಪತ್ನಿ ಮಾಲೀಕತ್ವದ ಪೆಟ್ರೋಲ್ ಬಂಕ್ ಮೇಲೂ ದಾಳಿ ನಡೆದಿದೆ. ದಾಖಲೆಗಳು, ನಗದು ಹಾಗೂ ಚಿನ್ನಾಭರಣಗಳು ಸಿಕ್ಕಿವೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

ಲೋಕಾಯುಕ್ತ ಎಸ್ಪಿ ನಟರಾಜ್ ನೇತೃತ್ವದ ತಂಡ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಅವರ ಮಂಗಳೂರಿನ ವೆಲೆನ್ಸಿಯ ದಲ್ಲಿರುವ ಮನೆ ಹಾಗೂ ಮಲ್ಲಿಕಟ್ಟೆಯಲ್ಲಿರುವ ಕಚೇರಿ ಮೇಲೆ ದಾಳಿ ನಡೆಸಿದೆ. 2 ತಿಂಗಳ ಹಿಂದೆಯಷ್ಟೇ ಕೃಷ್ಣವೇಣಿ ಮಂಗಳೂರಿಗೆ ವರ್ಗಾವಣೆಯಾಗಿ ಬಂದಿದ್ದರು.

ಅಬಕಾರಿ ಎಸ್ಪಿ ಮೋಹನ್ ಅವರ ವಾಜರಹಳ್ಳಿಯ ವಿಲ್ಲಾದ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಸತತ 4 ಗಂಟೆಗಳಿಂದ ತಲಾಷ್ ನಡೆಸುತ್ತಿದೆ. ಮೋಹನ್ ಮನೆ ಮೇಲೆ 15 ಅಧಿಕಾರಿಗಳು ದಾಳಿ ನಡೆಸಿ ದಾಖಲಾತಿಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಅಲ್ಲದೇ ಮೋಹನ್ ಸರ್ಕಾರಿ ವಾಹನದಲ್ಲಿದ್ದ ದಾಖಲಾತಿ ವಶಕ್ಕೆ ಪಡೆದಿದ್ದಾರೆ. ಮೋಹನ್ ಪತ್ನಿಯನ್ನು ಅಧಿಕಾರಿಗಳು ಬ್ಯಾಂಕ್ಗೆ ಕರೆದೊಯ್ದು ದಾಖಲೆ ಸಂಗ್ರಹಕ್ಕೆ ಮುಂದಾಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments