Sunday, November 24, 2024
Google search engine
Homeರಾಜಕೀಯಕೇಂದ್ರದಿಂದ 5.80 ಕೋಟಿ ರೇಷನ್ ಕಾರ್ಡ್ ರದ್ದು: ಸಚಿವ ಎಂಬಿ ಪಾಟೀಲ್ ಬಾಂಬ್

ಕೇಂದ್ರದಿಂದ 5.80 ಕೋಟಿ ರೇಷನ್ ಕಾರ್ಡ್ ರದ್ದು: ಸಚಿವ ಎಂಬಿ ಪಾಟೀಲ್ ಬಾಂಬ್

ಬೆಂಗಳೂರು: ರಾಜ್ಯದಲ್ಲಿ ಅನರ್ಹರ ಬಿಪಿಎಲ್ ಪಡಿತರ ಚೀಟಿ ರದ್ದುಪಡಿಸಿದ್ದನ್ನು ಪ್ರಶ್ನಿಸುತ್ತಿರುವ ಬಿಜೆಪಿ ನಾಯಕರು ಕೇಂದ್ರ ಸರ್ಕಾರ ದೇಶಾದ್ಯಂತ 5.80 ಕೋಟಿ ರೇಷನ್ ಕಾರ್ಡ್ ರದ್ದುಪಡಿಸಿದ್ದನ್ನು ಯಾಕೆ ಪ್ರಸ್ತಾಪಿಸುತ್ತಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಪ್ರಶ್ನಿಸಿದ್ದಾರೆ.

ಗುರುವಾರ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕೇಂದ್ರದ ಮೋದಿ ಸರಕಾರ ಡಿಜಿಟಲೀಕರಣದ ಹೆಸರಿನಲ್ಲಿ 5.80 ಕೋಟಿ ರೇಷನ್ ಕಾರ್ಡ್ ರದ್ದುಪಡಿಸಿದೆ. ಈ ಬಗ್ಗೆ ಬಿಜೆಪಿ ನಾಯಕರೇಕೆ ಗಪ್-ಚುಪ್ ಆಗಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ರಾಜ್ಯ ಬಿಜೆಪಿಯ ವಿಜಯೇಂದ್ರ, ಅಶೋಕ, ಬಸನಗೌಡ ಪಾಟೀಲ ಯತ್ನಾಳ ಮತ್ತು ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಹಾಗೂ ಶೋಭಾ ಕರಂದ್ಲಾಜೆ ಅವರಿಗೆ ಟ್ಯಾಗ್ ಮಾಡಿರುವ ಸಚಿವರು, ರೇಷನ್ ಕಾರ್ಡ್ ರದ್ದು ಬಗ್ಗೆ ಪ್ರಧಾನಿ ಮುಂದೆ ಹೋಗಿ ಬಿಜೆಪಿ ನಾಯಕರು ಪ್ರತಿಭಟನೆ ಮಾಡಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ.

ರಾಜ್ಯ ಬಿಜೆಪಿ ಇಬ್ಭಾಗವಾಗಿದೆ. ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಯತ್ನಾಳ ಮತ್ತು ಅವರ ತಂಡ ಪ್ರಯತ್ನಿಸುತ್ತಿದೆ. ಈಗ ವಿನಾ ಕಾರಣ ಪಡಿತರ ಚೀಟಿ ಹೆಸರಿನಲ್ಲಿ ಗದ್ದಲ ಸೃಷ್ಟಿಸುತ್ತಿದ್ದಾರೆ. ಬಿಪಿಎಲ್ ಪಡಿತರ ಚೀಟಿಯು ನಿಜವಾದ ಬಡವರಿಗೆ ಸಿಗಬೇಕು. ಹೀಗಾಗಿಯೇ ರಾಜ್ಯ ಸರ್ಕಾರವು ಶ್ರೀಮಂತರು, ತೆರಿಗೆ ಪಾವತಿದಾರರು ಮತ್ತು ಸರಕಾರಿ ಅಧಿಕಾರಿಗಳ ಬಳಿ‌ ಇರುವ ಬಿಪಿಎಲ್ ಕಾರ್ಡುಗಳನ್ನು ರದ್ದುಪಡಿಸುತ್ತಿದೆ. ರಾಜ್ಯ ಬಿಜೆಪಿ ನಾಯಕರು ಇದರ ವಿರುದ್ಧ ಮಾತನಾಡುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಅವರು ಹೇಳಿದ್ದಾರೆ.

ನಮ್ಮ ವಿರುದ್ಧ ಆರೋಪ ಮಾಡುತ್ತಿರುವ ವಿಜಯೇಂದ್ರ, ಅಶೋಕ, ಯತ್ನಾಳ ಅವರಿಗೆ ದೆಹಲಿಗೆ ಹೋಗಿ ಪ್ರಧಾನಿ ಮನೆಯ ಎದುರು ಧರಣಿ ಕೂರುವ ಧೈರ್ಯ ಇದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments