Monday, 16 November 2026 — Kannadavahini
BREAKING NEWS
ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ!
ಜಿಲ್ಲಾ ಸುದ್ದಿ

Election ಚುನಾವಣಾ ಸಮೀಕ್ಷೆಗಳು ಉಲ್ಟಾ ಹೊಡೆಯಲಿವೆ: ಡಿಕೆ ಶಿವಕುಮಾರ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 23 ವೀಕ್ಷಣೆಗಳು
dk shivakumar

ಉಪಚುನಾವಣೆಯಲ್ಲಿ ನಿಮ್ಮ ಎಕ್ಸಿಟ್ ಪೋಲ್ ಫಲಿತಾಂಶಗಳೆಲ್ಲಾ ತಲೆಕೆಳಗಾಗುತ್ತವೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಮುರುಡೇಶ್ವರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಮಹಾರಾಷ್ಟ್ರದಲ್ಲೂ ಗೆದ್ದೇ ಗೆಲ್ಲುತ್ತೇವೆ ಎನ್ನುವ ಆತ್ಮವಿಶ್ವಾಸವಿದೆ. ನನಗೆ ಆ ರಾಜ್ಯದ ಬಗ್ಗೆ ಹೆಚ್ಚು ಚಿತ್ರಣವಿಲ್ಲ ಎಂದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರು ಸರಳ ಬಹುಮತ ಪಡೆದು ಸರ್ಕಾರ ರಚನೆ ಮಾಡುತ್ತೇವೆ ಎಂದು ಹೇಳಿದ್ದಾರೆ. ನಾನು ಕೂಡ ಪ್ರಚಾರಕ್ಕೆ ಹೋಗಿದ್ದೆ, ಆಗ ಕಾಂಗ್ರೆಸ್ ಪರ ಅಲೆ ಕಂಡಿತು. ಆದರೆ ಮತ ಪೆಟ್ಟಿಗೆಯಲ್ಲಿ ಏನಿದೆ ಎಂಬುದು ಯಾರಿಗೂ ತಿಳಿಯುವುದಿಲ್ಲ. ಜಾರ್ಖಂಡ್ ಬಗ್ಗೆ ಗೊತ್ತಿಲ್ಲ ಎಂದು ಅವರು ಹೇಳಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕೇವಲ 16 ಸಾವಿರ ಮತಗಳು ಮಾತ್ರ ದೊರೆತಿದ್ದವು. ಆದರೆ ಈ ಬಾರಿ ಗೆದ್ದೇ ಗೆಲ್ಲುತ್ತೇವೆ ಎನ್ನುವ ಆತ್ಮವಿಶ್ವಾಸ ನನಗಿದೆ. ರಾಮನಗರದಲ್ಲಿ ಇಕ್ಬಾಲ್ ಹುಸೇನ್, ಮಾಗಡಿಯಲ್ಲಿ ಬಾಲಕೃಷ್ಣ, ಕನಕಪುರದಲ್ಲಿ ನಾನು ಗೆದ್ದಿದ್ದೆವು. ಚನ್ನಪಟ್ಟಣದಲ್ಲಿ ಮಾತ್ರ ಗೆದ್ದಿರಲಿಲ್ಲ. ಈ ಬಾರಿ ಗೆಲುವು ಖಂಡಿತ ಎಂದರು.

ಜಮೀರ್ ತಪ್ಪಿನ ಅರಿವಾಗಿ ಕ್ಷಮೆ ಕೇಳಿದ್ದಾರೆ

ಜಮೀರ್ ಅವರು ಉತ್ತಮ ಕೆಲಸಗಾರ. ಇದು ಪಕ್ಷದ ಆಂತರಿಕ ವಿಚಾರ. ಅವರಿಗೆ ಈ ಬಗ್ಗೆ ಬುದ್ದಿ ಹೇಳಲಾಗಿದೆ. ಅವರು ಆತುರವಾಗಿ ಒಂದಷ್ಟು ಹೇಳಿಕೆ ಕೊಟ್ಟಿದ್ದಾರೆ. ಇದು ತಪ್ಪು ಎಂದು ನಾವು ಹೇಳಿದ್ದೇವೆ. ಪಕ್ಷದ ಅಧ್ಯಕ್ಷನಾಗಿ ನಾನೇ ಅವರಿಗೆ ಬುದ್ಧಿ ಹೇಳಿದ್ದೇನೆ. ನನ್ನ ಹೊರತಾಗಿ ಮತ್ತಿನ್ಯಾರು ಅವರಿಗೆ ಬುದ್ಧಿವಾದ ಹೇಳಬೇಕು? ಜಮೀರ್ ಅವರು ಈಗಾಗಲೇ ಅವರ ಹೇಳಿಕೆಯ ಬಗ್ಗೆ ಕ್ಷಮೆ ಕೇಳಿದ್ದಾರೆ. ಅವರಿಗೆ ತಮ್ಮ ತಪ್ಪಿನ ಅರಿವಾಗಿದೆ ಎಂದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8419 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment